ಮಡಿಕೇರಿ ಮೇ 28 NEWS DESK : ಮುಂದಿನ ವರ್ಷ ನಡೆಯಲಿರುವ ಕೊಡವ ಕುಟುಂಬಗಳ ನಡುವಿನ 25ನೇ ವರ್ಷದ ಪ್ರತಿಷ್ಠಿತ ಮುದ್ದಂಡ ಹಾಕಿ ಹಬ್ಬಕ್ಕೆ ಮುದ್ದಂಡ ಕುಟುಂಬಸ್ಥರು ಪೂರ್ವಭಾವಿ ತಯಾರಿಯಲ್ಲಿ ತೊಡಗಿದ್ದಾರೆ.
ನಗರದ ಹೊರ ವಲಯದ ಕರವಲೆ ಶ್ರೀ ಭಗವತಿ ಮಹಿಷ ಮರ್ದಿನಿ ದೇವಾಲಯದಲ್ಲಿ ಮುದ್ದಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿ ಹಾಕಿ ಹಬ್ಬದ ಯಶಸ್ಸಿಗಾಗಿ ಪ್ರಾರ್ಥಿಸಿದರು. 2025 ರಲ್ಲಿ ಹಾಕಿ ಹಬ್ಬ ನಡೆಸಲು ಮುದ್ದಂಡ ಕುಟುಂಬಕ್ಕೆ ಕೊಡವ ಹಾಕಿ ಅಕಾಡೆಮಿ ಅಧಿಕೃತವಾಗಿ ಹಕ್ಕೋಲೆ (ಹಕ್ಕುಪತ್ರ) ನೀಡುವ ಮೂಲಕ ಶುಭ ಹಾರೈಸಿತು.
ಈ ಸಂದರ್ಭ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡAಡ ಬೋಪಣ್ಣ, ಉಪಾಧ್ಯಕ್ಷರುಗಳಾದ ಕುಕ್ಕೇರ ಜಯ ಚಿಣ್ಣಪ್ಪ, ಬರಕಡ ಡೀನಾ ಪೂವಯ್ಯ, ಗೌರವ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ಜಂಟಿ ಕಾರ್ಯದರ್ಶಿ ಚೆಯ್ಯಂಡ ಸತ್ಯ, ಎಲ್ಲಾ ನಿರ್ದೇಶಕರುಗಳು, ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಗೌರವಾಧ್ಯಕ್ಷ ಮುದ್ದಂಡ.ಬಿ.ದೇವಯ್ಯ, ಕಾರ್ಯಕಾರಿ ಮಂಡಳಿಯ ಮುದ್ದಂಡ ಡೀನ್ ಬೋಪಣ್ಣ, ಮುದ್ದಂಡ ರಾಯ್, ಮುದ್ದಂಡ ರಂಜಿತ್ ಪೊನ್ನಪ್ಪ, ಮುದ್ದಂಡ ಕಿರಣ್ ಪೂಣಚ್ಚ, ಮುದ್ದಂಡ ಆದ್ಯ ತಿಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.
ಮುಂದಿನ ವರ್ಷ ಮಡಿಕೇರಿಯ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ “ಮುದ್ದಂಡ ಹಾಕಿ ಹಬ್ಬ” ನಡೆಯಲಿದೆ.
Breaking News
- *ಕೊಡಗಿನ ಆದಿವಾಸಿಗಳ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ : ಅಧಿಕಾರಿಗಳಿಗೆ 2 ತಿಂಗಳ ಗಡುವು*
- *ಸಿಎನ್ಸಿಯಿಂದ “ಕೊಡವ ನ್ಯಾಷನಲ್ ಡೇ” ಮತ್ತು ಸಂವಿಧಾನ ದಿನಾಚರಣೆ : 9 ಪ್ರಮುಖ ನಿರ್ಣಯಗಳ ಮಂಡನೆ*
- *ಮಡಿಕೇರಿ : ನ.27 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಮಡಿಕೇರಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ : ಸಿವಿಲ್ ನ್ಯಾಯಾಧೀಶೆ ಶುಭ*
- *ವಿರಾಜಪೇಟೆಯಲ್ಲಿ ನ.27 ರಂದು ಕಾವೇರಿ ಕಾರ್ನಿವಾಲ್ ಫೆಸ್ಟ್*
- *ಚೆಟ್ಟಳ್ಳಿ ಗ್ರಾ.ಪಂ ಉಪಚುನಾವಣೆ : ಅಯ್ಯಂಡ್ರ ಭಾಗೀರಥಿ ಗೆಲುವು*
- *ಸಹಕಾರ ತರಬೇತಿ (ಡಿಸಿಎಂ)ಗೆ ಅರ್ಜಿ ಆಹ್ವಾನ*
- *ತ್ಯಾಗರಾಜ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ : ಪರಿಸರರೊಂದಿಗೆ ಮಕ್ಕಳು ಬೆಳೆಯಬೇಕು : ಗೀತಾ ಗಿರೀಶ್*
- *ಮಡಿಕೇರಿಯಲ್ಲಿ ಸಂವಿಧಾನ ದಿನಾಚರಣೆ : ರಾಷ್ಟ್ರದ ಅಭಿವೃದ್ಧಿಗೆ ಸಂವಿಧಾನ ಪಾತ್ರ ಪ್ರಮುಖ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*
- *ಪುತ್ತೂರು : ವಿಸಿಇಟಿಯಲ್ಲಿ ಮಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ*