ಮಡಿಕೇರಿ ಮೇ 29 NEWS DESK : ಶಿಕ್ಷಕರು ಹಾಗೂ ಪದವೀಧರರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಡಿಕೇರಿಗೆ ಆಗಮಿಸಿದ ಸಚಿವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಸಭೆ ನಡೆಸಿದರು.
ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಮತ್ತು ಪದವೀಧರರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಅವರುಗಳ ಗೆಲುವಿಗೆ ಪಣ ತೊಡುವಂತೆ ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರಾಜ್ಯ ಸರಕಾರಿ ಚುನಾವಣೆ ಪೂರ್ವ ನೀಡಿದ್ದ ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ ತಂದಿದ್ದು ಹೆಮ್ಮೆ ಎನಿಸಿದೆ. ರಾಜ್ಯದಲ್ಲಿ 43 ಸಾವಿರ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಾತ್ರವಲ್ಲದೇ ನೂತನ ಪಿಂಚಣಿ ವ್ಯವಸ್ಥೆಯನ್ನು ಬದಲಿಸಿ ಮತ್ತೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೂ ನೀತಿ ಸಂಹಿತೆ ಮುಕ್ತಾಯವಾದ ಬಳಿಕ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಶಿಕ್ಷಕರು ಮತ್ತು ಪದವೀಧರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಮಗೂ ಅರಿವಿದ್ದು, ಹಂತ ಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಬಗೆ ಹರಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಭಾಗವಾಗಿ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದ ಎಲ್ಲೆಡೆ 600 ಕೆಪಿಎಸ್ ಶಾಲೆಗಳನ್ನು ತೆರೆಯಲು ಕೂಡ ನಿರ್ಧರಿಸಲಾಗಿದೆ. ಇದಕ್ಕಾಗಿ 2 ಸಾವರಿ ಕೋಟಿ ರೂ.ಗಳ ಅಗತ್ಯವಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇದರ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಕಾರ್ಯ ಕೂಡ ಮುಂದಿನ ವರ್ಷದಿಂದಲೇ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಹೇಳಿದರು. ಒಟ್ಟಿನಲ್ಲಿ ರಾಜ್ಯ ಸರಕಾರ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದಂತೆ ಎಲ್ಲಾ ಯೋಜನೆಗಳನ್ನು ಅನುಷ್ಟಾನಕ್ಕೆ ತರುತ್ತಿದ್ದು, ಪದವೀಧರರಿಗೆ ಯುವ ನಿಧಿ ಮಾದರಿಯಲ್ಲಿ ರಾಷ್ಟ್ರ ಮಟ್ಟದಲ್ಲೇ ಯೋಜನೆ ಜಾರಿಯಾಗಲಿದೆ. ಶಿಕ್ಷಕರು ಮತ್ತು ಪದವೀಧರರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯ ಸರಕಾರಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿ, ತಾವು ಕಾರ್ಮಿಕ ಸಂಘಟನೆಯ ಹಿನ್ನೆಲೆಯನ್ನು ಹೊಂದಿದ್ದು, ದುಡಿಯುವ ವರ್ಗದ ಸಮಸ್ಯೆಗಳ ಅರಿವಿದೆ. ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭ ಸದನದಲ್ಲಿ ಪಟ್ಟು ಹಿಡಿದು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿದ್ದೆ. ಇಂತಹ ಪ್ರಕರಣ ದೇಶದಲ್ಲಿಯೇ ಮೊದಲು ಎಂದು ಹೇಳಿದರು. 7ನೇ ವೇತನ ಆಯೋಗದ ಕುರಿತು ನೀತಿ ಸಂಹಿತೆ ಮುಗಿದ ಬಳಿಕ ನಿರ್ಧಾರವಾಗಲಿದೆ ಎಂದು ಹೇಳಿದರು. ಅತಿಥಿ ಉಪನ್ಯಾಸಕರ ವೇತನವನ್ನು 40 ಸಾವಿರಕ್ಕೆ ಏರಿಕೆ ಮಾಡಿರುವುದು, ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರಿಗೆ ಅಘೋಷಿತ ಪ್ರಯಾಣ ಭತ್ಯೆ, ಉಚಿತ ವಿದ್ಯುತ್ ನೀಡುವ ಮೂಲಕ ಕುಟುಂಬದ ಉಳಿತಾಯ ಏರಿಕೆಗೂ ರಾಜ್ಯ ಕಾಂಗ್ರೆಸ್ ಸರಕಾರ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಜನರು ಕೂಡ ಸರಕಾರದ ಪರವಾಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 30 ವಿಧಾನ ಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸಿದ ಸಂದರ್ಭ ಉತ್ತಮ ಸ್ಪಂದನೆ ಮತ್ತು ಸ್ವಾಗತ ದೊರಕಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಆಯನೂರು ಮಂಜುನಾಥ್ ಹೇಳಿದರು.
ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಶಿಕ್ಷಣ ಕ್ಷೇತ್ರದ ಗುಣಮಟ್ಟ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಹಣ ಮೀಸಲಿಟ್ಟಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಲಿಸಿ, ರಾಜ್ಯ ಶಿಕ್ಷಣ ನೀತಿ ಜಾರಿಗೂ ಮುನ್ಸೂಚನೆ ಸಿಕ್ಕಿದೆ ಎಂದು ಮಂಜುನಾಥ್ ಕುಮಾರ್ ಹೇಳಿದರು. ಈ ಹಿಂದೆ ಶಿಕ್ಷಕರ ಕೇತ್ರವನ್ನು ಪ್ರತಿನಿಧಿಸಿದ್ದವರು ಗೆದ್ದ ಬಳಿಕ ಕ್ಷೇತ್ರದ ಕಡೆ ತಿರುಗಿಯೂ ನೋಡಲಿಲ್ಲ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದೇ ಅವರು ಕೇವಲ ವಿದೂಷಿಯ ಪಾತ್ರ ನಿರ್ವಹಿಸಿದ್ದರು. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಮಂಜುನಾಥ್ ಕುಮಾರ್ ಹೇಳಿದರು. ಶಿಕ್ಷಕರ ಸಮಸ್ಯೆಗಳನ್ನು ಅರಿತು ಅದನ್ನು ಪರಿಹರಿಸಲು ಓರ್ವ ಶಿಕ್ಷಕನಿಂದಲೇ ಸಾಧ್ಯ. ಈ ಹಿನ್ನೆಲೆಯಲ್ಲಿ ಜೂ.3ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಪರಾಭವಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಶಾಸಕ ಡಾ. ಮಂತರ್ ಗೌಡ, ಕೆಪಿಸಿಸಿ ಮುಖಂಡರಾದ ಟಿ.ಪಿ.ರಮೇಶ್ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.
Breaking News
- *ಕೊಡಗಿನ ಆದಿವಾಸಿಗಳ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ : ಅಧಿಕಾರಿಗಳಿಗೆ 2 ತಿಂಗಳ ಗಡುವು*
- *ಸಿಎನ್ಸಿಯಿಂದ “ಕೊಡವ ನ್ಯಾಷನಲ್ ಡೇ” ಮತ್ತು ಸಂವಿಧಾನ ದಿನಾಚರಣೆ : 9 ಪ್ರಮುಖ ನಿರ್ಣಯಗಳ ಮಂಡನೆ*
- *ಮಡಿಕೇರಿ : ನ.27 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಮಡಿಕೇರಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ : ಸಿವಿಲ್ ನ್ಯಾಯಾಧೀಶೆ ಶುಭ*
- *ವಿರಾಜಪೇಟೆಯಲ್ಲಿ ನ.27 ರಂದು ಕಾವೇರಿ ಕಾರ್ನಿವಾಲ್ ಫೆಸ್ಟ್*
- *ಚೆಟ್ಟಳ್ಳಿ ಗ್ರಾ.ಪಂ ಉಪಚುನಾವಣೆ : ಅಯ್ಯಂಡ್ರ ಭಾಗೀರಥಿ ಗೆಲುವು*
- *ಸಹಕಾರ ತರಬೇತಿ (ಡಿಸಿಎಂ)ಗೆ ಅರ್ಜಿ ಆಹ್ವಾನ*
- *ತ್ಯಾಗರಾಜ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ : ಪರಿಸರರೊಂದಿಗೆ ಮಕ್ಕಳು ಬೆಳೆಯಬೇಕು : ಗೀತಾ ಗಿರೀಶ್*
- *ಮಡಿಕೇರಿಯಲ್ಲಿ ಸಂವಿಧಾನ ದಿನಾಚರಣೆ : ರಾಷ್ಟ್ರದ ಅಭಿವೃದ್ಧಿಗೆ ಸಂವಿಧಾನ ಪಾತ್ರ ಪ್ರಮುಖ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*
- *ಪುತ್ತೂರು : ವಿಸಿಇಟಿಯಲ್ಲಿ ಮಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ*