ಮಡಿಕೇರಿ ಮೇ 29 NEWS DESK : ಶಿಕ್ಷಣ ಕ್ಷೇತ್ರದ ಗುಣಮಟ್ಟ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಹಣ ಮೀಸಲಿಟ್ಟಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಲಿಸಿ, ರಾಜ್ಯ ಶಿಕ್ಷಣ ನೀತಿ ಜಾರಿಗೂ ಮುನ್ಸೂಚನೆ ಸಿಕ್ಕಿದೆ ಎಂದು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಹೇಳಿದರು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಶಿಕ್ಷಕರ ಕೇತ್ರವನ್ನು ಪ್ರತಿನಿಧಿಸಿದ್ದವರು ಗೆದ್ದ ಬಳಿಕ ಕ್ಷೇತ್ರದ ಕಡೆ ತಿರುಗಿಯೂ ನೋಡಲಿಲ್ಲ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದೇ ಅವರು ಕೇವಲ ವಿದೂಷಿಯ ಪಾತ್ರ ನಿರ್ವಹಿಸಿದ್ದರು. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಮಂಜುನಾಥ್ ಕುಮಾರ್ ಹೇಳಿದರು.
ಶಿಕ್ಷಕರ ಸಮಸ್ಯೆಗಳನ್ನು ಅರಿತು ಅದನ್ನು ಪರಿಹರಿಸಲು ಓರ್ವ ಶಿಕ್ಷಕನಿಂದಲೇ ಸಾಧ್ಯ. ಈ ಹಿನ್ನೆಲೆಯಲ್ಲಿ ಈ ಬಾರಿ ಜೂ.3ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಪರಾಭವಗೊಳಿಸುವಂತೆ ಮನವಿ ಮಾಡಿದರು.