ಮಡಿಕೇರಿ ಮೇ 29 NEWS DESK : ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಅಸಹಜ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಸುಂಟಿಕೊಪ್ಪ ಸಮೀಪ ಕೊಡಗರಳ್ಳಿ ಗ್ರಾಮದ ಪಂಪ್ ಹೌಸ್ ಬಳಿ ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಮೃತಪಟ್ಟಿದೆ. ಈ ಘಟನೆ ಇಂದು ಬೆಳಿಗ್ಗೆ ನಡೆದಿರಬಹುದೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಜಿಲ್ಲೆಯ ವಿವಿಧೆಡೆ ಎರಡು ಕಾಡಾನೆಗಳ ಮೃತದೇಹ ಪತ್ತೆಯಾಗಿತ್ತು.









