ಸುಂಟಿಕೊಪ್ಪ ಮೇ 29 NEWS DESK : ಮಾದಾಪುರ ಸಮೀಪದ ಕುಂಬೂರುವಿನಲ್ಲಿ ನೂತನವಾಗಿ ಲೋಕಾರ್ಪಣೆಗೊಂಡ ಪವಿತ್ರ ಕುಟುಂಬ ದೇವಾಲಯದಲ್ಲಿ ಪ್ರಥಮ ಬಲಿಪೂಜೆ ಹಾಗೂ ಮಕ್ಕಳಿಗೆ ನೂತನ ಪರಮ ಪ್ರಸಾದವನ್ನು ನೀಡಲಾಯಿತು.
ಕುಂಬೂರುವಿನ ಪವಿತ್ರ ಕುಟುಂಬ ದೇವಾಲಯದಲ್ಲಿ ಹಟ್ಟಿಹೊಳೆ ಜಪಸರಮಾತೆ ದೇವಾಲಯದ ಧರ್ಮಗುರುಗಳಾದ ರೇ.ಫಾ.ಗಿಲ್ಬರ್ಟ್ ಡಿಸಿಲ್ವ, ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಸಹಾಯಕ ಧರ್ಮಗುರು ರೇ.ಪಾ.ನವೀನ್ ಕುಮಾರ್ ಹಾಗೂ ಪವಿತ್ರ ಕುಟುಂಬ ದೇವಾಲಯದ ಧರ್ಮಗುರುಗಳಾದ ರಾಜೇಶ್ ಅಡಂಬರ ಬಲಿಪೂಜೆ ಹಾಗೂ ಮಕ್ಕಳಿಗೆ ನೂತನ ಪರಮ ಪ್ರಸಾದವನ್ನು ನೀಡಿದರು.
ಮಾದಾಪುರ, ಸುಂಟಿಕೊಪ್ಪ, ಹಟ್ಟಿಹೊಳೆ ಮಡಿಕೇರಿ, ಸೋಮವಾರಪೇಟೆ ಸೇರಿದಂತೆ ವಿವಿಧೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬಲಿಪೂಜೆಯಲ್ಲಿ ಪಾಲ್ಗೊಂಡಿದ್ದರು. 









