ಪುತ್ತೂರು ಮೇ 29 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಐಇಇಇ ಮಂಗಳೂರು ಉಪ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಐಎಸ್‍ಟಿಇ ನವದೆಹಲಿ, ವಿವೇಕಾನಂದ ಸೆಂಟರ್ ಫಾರ್ ರೀಸರ್ಚ್ ಸ್ಟಡೀಸ್, ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಹಾಗೂ ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಹಭಾಗಿತ್ವದಲ್ಲಿ ಮೇ 31 ರಂದು ರಾಜ್ಯಮಟ್ಟದ ಐ2 ಕನೆಕ್ಟ್-2024 (I2CONECCT-2024) ಪ್ರಾಜೆಕ್ಟ್‍ಗಳ ಪ್ರದರ್ಶನ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಐಇಇಇ ಮಂಗಳೂರು ಉಪ ವಿಭಾಗದ ಪ್ರಮುಖ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ನವ-ನವೀನ ಯೋಜನೆಗಳ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಅಲ್ಲದೆ ಅತ್ಯುತ್ತಮ ಸಾಧನೆಗಳನ್ನು ಗುರುತಿಸುವ ಸ್ಪರ್ಧೆಯೂ ಇರುತ್ತದೆ. ರಾಜ್ಯಾದ್ಯಂತ ವಿವಿಧ ಇಂಜಿನಿಯರಿಂಗ್, ಎಂಬಿಎ ಮತ್ತು ಎಂಸಿಎ ವಿಭಾಗದ 200ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳುತ್ತಾರೆ.
ಅಂದು ಬೆಳಿಗ್ಗೆ 9.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರಿನ ಯುನಿಕೋರ್ಟ್ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಆಂಟೋನಿಯೋ ಧರ್ಮದಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಟಿ.ಎಸ್.ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಣಿಪಾಲ್ ಡಾಟ್ ನೆಟ್ ಸಂಸ್ಥೆಯ ಸಂಶೋಧನೆ ಮತ್ತು ತರಬೇತಿ ವಿಭಾಗದ ನಿರ್ದೇಶಕ ಡಾ.ಯು.ಸಿ.ನಿರಂಜನ್ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಂಶುಪಾಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಕಾರ್ಯಕ್ರಮ ಸಂಯೋಜಕರಾದ ಡಾ.ಜೀವಿತಾ.ಬಿ.ಕೆ ಹಾಗೂ ಪ್ರೋ.ರಜನಿ ರೈ.ಬಿ ಅವರ ಮುಂದಾಳುತ್ವದಲ್ಲಿ ಸಕಲ ಸಿದ್ದತೆಗಳನ್ನು ಮಾಡಲಾಗಿದೆ ಎಂದು ಪ್ರಾಂಶುಪಾಲ ಡಾ. ಕೆ.ಮಹೇಶ್ ಪ್ರಸನ್ನ ತಿಳಿಸಿದ್ದಾರೆ.