ಮಡಿಕೇರಿ ಮೇ 29 NEWS DESK : ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ ಸಂಬಂಧಿಸಿದಂತೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಯು ಇದೇ ಜೂ.3 ರಂದು ನಡೆಯಲಿದೆ.
ಜೂ.3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ. ನೈರುತ್ಯ ಪದವೀಧರರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರ ಸಂಬಂಧ ಮತದಾನ ನಡೆಯುವ ಮತಗಟ್ಟೆ ವಿವರ ಇಂತಿದೆ. (ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ).
ಜಿಲ್ಲೆಯ ಮತಗಟ್ಟೆ ಸಂಖ್ಯೆ 30-ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಚೇರಿ, ಮತಗಟ್ಟೆ ಸಂಖ್ಯೆ 31-ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಮತಗಟ್ಟೆ ಸಂಖ್ಯೆ 32-ಮಡಿಕೇರಿ ನಗರಸಭೆ ಸಭಾಂಗಣ (ಬಲಭಾಗ), ಮತಗಟ್ಟೆ 32ಎ- ನಗರಸಭೆ ಸಭಾಂಗಣ(ಎಡಭಾಗ), ಮತಗಟ್ಟೆ 33-ವಿರಾಜಪೇಟೆ ಪುರಸಭೆ ಕಚೇರಿ, ಮತಗಟ್ಟೆ ಸಂಖ್ಯೆ 34- ಪೊನ್ನಂಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಮತದಾನ ನಡೆಯಲಿದೆ.
ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ಒಟ್ಟು 1578 ಮತದಾರರು ಇದ್ದು, ಇವರಲ್ಲಿ 543 ಪುರುಷರು ಮತ್ತು 1035 ಮಹಿಳಾ ಮತದಾರರು ಇದ್ದಾರೆ.
ಸೋಮವಾರಪೇಟೆ ತಾಲ್ಲೂಕಿನಲ್ಲಿ 234, ಕುಶಾಲನಗರ ತಾಲ್ಲೂಕಿನಲ್ಲಿ 337, ಮಡಿಕೇರಿ ತಾಲ್ಲೂಕಿನಲ್ಲಿ 441, ವಿರಾಜಪೇಟೆ ತಾಲ್ಲೂಕಿನಲ್ಲಿ 268 ಮತ್ತು ಪೊನ್ನಂಪೇಟೆ ತಾಲ್ಲೂಕಿನ 298 ಮಂದಿ ಮತದಾರರು ಇದ್ದಾರೆ.
ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ಒಟ್ಟು 3,909 ಮತದಾರರು ಇದ್ದು, ಇವರಲ್ಲಿ 1,699 ಪುರುಷ ಮತ್ತು 2210 ಮಹಿಳಾ ಮತದಾರರು ಇದ್ದಾರೆ.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಒಟ್ಟು 811, ಕುಶಾಲನಗರ ತಾಲ್ಲೂಕಿನಲ್ಲಿ 795, ಮಡಿಕೇರಿ ತಾಲ್ಲೂಕಿನಲ್ಲಿ 1143, ವಿರಾಜಪೇಟೆ ತಾಲ್ಲೂಕಿನಲ್ಲಿ 630 ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ 530 ಮಂದಿ ಮತದಾರರು ಇದ್ದಾರೆ.
ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆ ಒಳಗೊಂಡಿದೆ.