ಮಡಿಕೇರಿ ಮೇ 30 NEWS DESK : ಚೆನ್ನಂಗಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಸಕ್ತ ಸಾಲಿನ ಶೈಕ್ಷಣಿಕ ಬಲವರ್ಧನೆಗೆ ಪೂರಕವಾದ ‘ವಿದ್ಯಾ ಪ್ರವೇಶ’ ಮತ್ತು ‘ಸೇತು ಬಂಧ’ ಕಾರ್ಯಕ್ರಮಕ್ಕೆ ಅಲಂಕೃತ ನೂತನ ಶಾಲಾ ಕೊಠಡಿಯಲ್ಲಿ ಗಣ್ಯರು ಚಾಲನೆ ನೀಡಿದರು.
ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರ ಅರುಣ್ ಕುಮಾರ್ ಮಾತನಾಡಿ, ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿವೆ. ಇದರ ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ವಿದ್ಯಾರ್ಥಿಗಳು ಶಾಲೆಗೆ ತಪ್ಪದೆ ಹಾಜರಾಗುವ ಮೂಲಕ ಕಲಿಕೆಯ ಗುರಿಯೊಂದಿಗೆ ಮುನ್ನಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.
ಪಾಲಿಬೆಟ್ಟದ ಸಮಾಜ ಸೇವಕ ಡಾ.ಎ.ಸಿ.ಗಣಪತಿ ಮಾತನಾಡಿ, ಈ ಹಿಂದೆ ಮೂಲ ಸಂಕಷ್ಟಗಳ ನಡುವೆಯೂ ಶಿಕ್ಷಣ ಪಡೆದ ಅದೆಷ್ಟೋ ಮಂದಿ ಉನ್ನತ ಹುದ್ದೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಸರ್ಕಾರ ಹಾಗೂ ದಾನಿಗಳ ಸಹಕಾರದಿಂದ ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳು ಸಿಗುತ್ತಿದ್ದು ಇದರ ಸದುಪಯೋಗಪಡಿಸಿಕೊಂಡು ಮುನ್ನಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಶಾಲಾ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳ ಹಾವಳಿಯಿಂದ ಭಯ ಬೀತರಾಗುತ್ತಿರುವ ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆ ವಾಹನದ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಮನವಿ ಮಾಡಿದರು. ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸುವ ಮೂಲಕ ಮಕ್ಕಳ ಭವಿಷ್ಯವನ್ನು ರೂಪಿಸಲು ಮುಂದಾಗಬೇಕೆಂದರು.
ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ, ಬಸ್ ಸಂಚಾರವಿಲ್ಲದ ಗ್ರಾಮೀಣ ಭಾಗದ ಶಾಲೆಗೆ ಶಿಕ್ಷಕರುಗಳು ದೂರದಿಂದ ಆಗಮಿಸಿ ಮಕ್ಕಳಿಗೆ ಶಿಕ್ಷಣವನ್ನು ನೀಡುವುದರೊಂದಿಗೆ ಶಾಲೆಯ ಪರಿಸರವನ್ನು ಅಚ್ಚುಕಟ್ಟಾಗಿ ಇಟ್ಟುಕೊಂಡಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮಕ್ಕಳನ್ನ ಕಡ್ಡಾಯವಾಗಿ ಹಾಜರಾತಿ ಮಾಡಿಸುವುದರ ಮೂಲಕ ಶಿಕ್ಷಕರುಗಳು ಮಾದರಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಆದಿವಾಸಿ ಮುಖಂಡ ಪಿ.ಕೆ.ಸಿದ್ದಪ್ಪ ಮಾತನಾಡಿ, ಸರ್ಕಾರ ಹಾಗೂ ದಾನಿಗಳ ಸಹಕಾರದಿಂದ ಶಾಲೆ ಅಚ್ಚುಕಟ್ಟಾಗಿ ನಡೆಯುತ್ತಿದೆ. ಶಾಲೆಯಲ್ಲಿ ಹೆಚ್ಚಾಗಿ ಆದಿವಾಸಿ ಮಕ್ಕಳೇ ಕಲಿಯುತ್ತಿದ್ದಾರೆ. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಅವರು ಎಲ್ಲಾ ಮಕ್ಕಳಿಗೆ ಗುಣಮಟ್ಟದ ಬ್ಯಾಗ್ ಗಳನ್ನು ವಿತರಣೆ ಮಾಡಿದ್ದಾರೆ. ಸಮಾಜ ಸೇವಕ ಎ.ಸಿ.ಗಣಪತಿಯವರು ಪರೀಕ್ಷಾ ಸಾಲಿನ ಸಂದರ್ಭ ಕಾಡು ಪ್ರಾಣಿಗಳ ಭಯದಿಂದ ಪರೀಕ್ಷೆಗೆ ಬರಲು ಹಿಂದೇಟು ಹಾಕುತ್ತಿದ್ದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾಹನ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ ಎಂದು ತಿಳಿಸಿದರು. ಶಾಲಾ ಮುಖ್ಯ ಶಿಕ್ಷಕಿ ಕೆ.ಕೆ.ಸುಷಾ ಮಾತನಾಡಿದರು
::: ಸನ್ಮಾನ :::
ಈ ಸಂದರ್ಭ ಸಮಾಜ ಸೇವಕ ಡಾ. ಎ ಸಿ ಗಣಪತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಬೇಬಿ, ಘಟದಳ ಶಾಲಾ ಶಿಕ್ಷಕ ಅಶ್ರಫ್, ಹುಂಡಿ ಶಾಲಾ ಶಿಕ್ಷಕಿ ಶೈಲಾ ಸೇರದಂತೆ ಶಾಲಾ ಶಿಕ್ಷಕರಗಳಾದ ಮಂಜುಳಾ, ಪ್ರತಿಮಾ, ಸತೀಶ್ ಸೇರಿದಂತೆ ಪೋಷಕರು ಹಾಜರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*