ಮಡಿಕೇರಿ ಮೇ 30 NEWS DESK : ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಸಂದರ್ಭ ಬೆಳೆಗಾರರೊಬ್ಬರು ಗಾಳಿಯಲ್ಲಿ ಗುಂಡು ಹಾರಿಸಿ, ಆ ವ್ಯಕ್ತಿಯನ್ನು ಪಾರು ಮಾಡಿದ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ.
ಪಾಲಿಬೆಟ್ಟದಿಂದ ಲೂರ್ಡ್ಸ್ ಶಾಲೆ ಬಳಿ ಇರುವ ಮನೆಗೆ ತೆರಳುತ್ತಿದ್ದ ವಾಹನ ಚಾಲಕ ಚಂದ್ರ ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿರುವ ಚಂದ್ರ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಂದ್ರ ಅವರು ರಾತ್ರಿ ಮನೆಗೆ ತೆರಳುತ್ತಿದ್ದ ಸಂದರ್ಭ ಕಾಫಿ ತೋಟದಿಂದ ಹಠಾತ್ತನೆ ಬಂದ ಕಾಡಾನೆಯೊಂದು ದಾಳಿ ಮಾಡಿತು. ತಪ್ಪಿಸಿಕೊಳ್ಳಲು ತೋಟದ ಗೇಟ್‌ನೊಳಗೆ ನುಸಳಿದಾಗ ಕಾಡಾನೆ ಗೇಟ್ ಮುರಿದು ಮತ್ತೆ ದಾಳಿ ಮಾಡಿದೆ.
ಚಂದ್ರ ಅವರ ಕಿರುಚಾಟದ ಶಬ್ಧ ಕೇಳಿ ಸಮೀಪದಲ್ಲೇ ಇದ್ದ ಬೆಳೆಗಾರ ಕುಟ್ಟಂಡ ಶ್ಯಾಂ ಸೋಮಣ್ಣ ಅವರು ತಕ್ಷಣ ಕೋವಿಯೊಂದಿಗೆ ಸ್ಥಳಕ್ಕೆ ಆಗಮಿಸಿದರು. ವ್ಯಕ್ತಿಯ ಮೇಲೆ ದಾಳಿ ಮಾಡುತ್ತಿದ್ದ ಕಾಡಾನೆಗೆ ಕಲ್ಲು ಬೀಸಿದರು. ಆದರೂ ಕಾಡಾನೆ ದಾಳಿ ನಿಲ್ಲಿಸದೆ ಇದ್ದಾಗ ಅವರು ಗಾಳಿಯಲ್ಲಿ ಬೆದರು ಗುಂಡು ಹಾರಿಸಿದರು. ಇದಕ್ಕೆ ಬೆದರಿದ ಕಾಡಾನೆ ಚಂದ್ರರನ್ನು ಬಿಟ್ಟು ಕಾಫಿ ತೋಟದೊಳಗೆ ನುಸುಳಿತು. ಕಾಡಾನೆ ಉಪಟಳದ ವಿರುದ್ಧ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.(ಸುದ್ದಿ ಕಳ್ಳತನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು)
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*