ಕುಶಾಲನಗರ ಮೇ 30 NEWS DESK : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೂಲಕ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಈ ವರ್ಷದ ಅಂತ್ಯದೊಳಗೆ ಎರಡು ಗ್ರಾಮಗಳನ್ನು ಪಾನಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಕಾರ್ಯಯೋಜನೆ ಸಿದ್ಧಪಡಿಸಲಾಗುವುದು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಫಾಯಸ್ ತಿಳಿಸಿದ್ದಾರೆ. ನಗರದಲ್ಲಿ ನಡೆದ ವೇದಿಕೆಯ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ಮದ್ಯ ಮತ್ತಿತರ ಚಟಗಳಿಂದ ವ್ಯಕ್ತಿಗಳನ್ನು ಮುಕ್ತರನ್ನಾಗಿಸುವಲ್ಲಿ ವೇದಿಕೆ ಯಶಸ್ವಿಯಾಗಿದೆ. ಇದೀಗ ಗ್ರಾಮಗಳನ್ನು ಪರಿವರ್ತನೆ ಮಾಡುವ ಮೂಲಕ ಪಾನಮುಕ್ತ ಗ್ರಾಮ ನಿರ್ಮಾಣ ಮಾಡುವುದು ವೇದಿಕೆಯ ಚಿಂತನೆಯಾಗಿದೆ ಎಂದರು. ಸರಕಾರ ನೂತನ ಮದ್ಯದ ಅಂಗಡಿಗಳಿಗೆ ಅನುಮತಿ ನೀಡಬಾರದು, ಮನೆ ಮನೆಯಲ್ಲಿ ಮಾರಾಟ ಮಾಡುವ ಪ್ರಕರಣಗಳ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ವೇದಿಕೆ ಜಿಲ್ಲಾಧಿಕಾರಿಗಳು, ಅಬಕಾರಿ ಇಲಾಖೆ ಸೇರಿದಂತೆ ಸಂಬAಧಿಸಿದ ಅಧಿಕಾರಿಗಳಿಗೆ ಹಕ್ಕೊತ್ತಾಯ ಮಂಡನೆ ಮಾಡಲಿದೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಾಲ ಕೊಡುತ್ತಿಲ್ಲ. ಬ್ಯಾಂಕ್ ಮೂಲಕ ಸಾಲ ನೀಡುತ್ತಾರೆ. ಸಂಘ ಕೇವಲ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸುತ್ತದೆ. ಸದಸ್ಯರಿಗೆ ಪ್ರಗತಿ ನಿಧಿಯನ್ನು ನೀಡುತ್ತದೆ, ಪ್ರಗತಿ ಆಧಾರದ ಮೇಲೆ ನಿಧಿ ನೀಡುವ ಕಾರ್ಯ ನಡೆಯುತ್ತಿದೆ. ಸಂಘದ ಹೆಸರಿನಲ್ಲಿ ಬಡ್ಡಿ ತೆಗೆದುಕೊಳ್ಳುವ ಬಗ್ಗೆ ತಪ್ಪು ಮಾಹಿತಿ ನೀಡುತ್ತಿರುವುದು ಸರಿಯಲ್ಲ. ಯೋಜನೆ ಸೇವಾ ಶುಲ್ಕ ಮಾತ್ರ ಪಡೆಯುತ್ತದೆ ಎಂದು ಸ್ಪಷ್ಟಪಡಿಸಿದರು. ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಎಂ.ಬಿ. ಅಭಿಮನ್ಯು ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಿಂದಿನ ಸಭೆಯ ನಡಾವಳಿಕೆಗಳು ಮತ್ತು ಕೈಗೊಂಡ ನಿರ್ಣಯಗಳ ಅನುಷ್ಠಾನದ ಕುರಿತು ಚರ್ಚಿಸಲಾಯಿತು. ಇದೇ ಸಂದರ್ಭ ವೇದಿಕೆಯ ಸದಸ್ಯರಿಗೆ ಆರೋಗ್ಯ ವಿಮೆಯ ಪತ್ರ ವಿತರಿಸಲಾಯಿತು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ರಂಗಸ್ವಾಮಿ, ಮಾಜಿ ಅಧ್ಯಕ್ಷರಾದ ಅರುಣ್ ಕುಮಾರ್ ಬಾನಂಗಡ, ವೇದಿಕೆ ಜಿಲ್ಲಾ ಕಾರ್ಯದರ್ಶಿಗಳು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ನಿರ್ದೇಶಕರಾದ ಲೀಲಾವತಿ, ಪ್ರಾದೇಶಿಕ ಅಧಿಕಾರಿ ಗಣೇಶ್ ಆಚಾರ್ಯ ವಿಪತ್ತು ನಿರ್ವಹಣಾ ತಂಡದ ಪ್ರಮುಖರು, ವೇದಿಕೆ ಸದಸ್ಯರು, ಸೋಮವಾರಪೇಟೆ ಮಡಿಕೇರಿ ವಿರಾಜಪೇಟೆ, ಪಿರಿಯಾಪಟ್ಟಣ, ಬೆಟ್ಟದಪುರ, ಅರಕಲಗೂಡು ತಾಲೂಕುಗಳ ಯೋಜನಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*