ಮಡಿಕೇರಿ ಮೇ 30 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕಾ ಕಾರ್ಯ ಜೂ.4 ರಂದು ಮೈಸೂರಿನ ಪಡುವಾರಹಳ್ಳಿಯ ವಾಲ್ಮೀಕಿ ರಸ್ತೆ ಬಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜಿನಲ್ಲಿ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತಾ ಕಾರ್ಯಗಳನ್ನು ಮಾಡಿಕೊಳ್ಳಲಾಗಿದೆ. ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಕೊಡಗಿನ ಮಡಿಕೇರಿ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ, ಮೈಸೂರು ಜಿಲ್ಲೆಯ ಹುಣಸೂರು, ಚಾಮರಾಜ, ಕೃಷ್ಣರಾಜ, ಚಾಮುಂಡೇಶ್ವರಿ, ಪಿರಿಯಾಪಟ್ಟಣ, ನರಸಿಂಹರಾಜ ಸೇರಿದಮತೆ ಒಟ್ಟು ಎಂಟು ಕ್ಷೇತ್ರಗಳ ಮತಗಳ ಎಣಿಕೆಗೆ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಲಾಗಿದೆ.
ಮಡಿಕೇರಿ ಕ್ಷೇತ್ರದ ಮತಗಳ ಎಣಿಕೆಗೆ ಕಾಲೆೆÃಜಿನ ಎರಡನೇ ಮಹಡಿಯ ಕೊಠಡಿ ಸಂಖ್ಯೆ 211 ರಲ್ಲಿ ಮತ್ತು ವಿರಾಜಪೇಟೆ ಕ್ಷೇತ್ರದ ಮತ ಎಣಿಕೆಗೆ ಎರಡನೇ ಮಹಡಿಯ ಕೊಠಡಿ ಸಂಖ್ಯೆ 203 ರಲ್ಲಿ ವ್ಯವಸ್ಥೆ ಮಾಡಲಾಗಿದ. ಮತ ಎಣಿಕೆಯ ದಿನದಂದು ಬೆಳಗ್ಗೆ 7.30 ಗಂಟೆಗೆ ಮೊಹರಾದ ಮತಯಂತ್ರಗಳನ್ನಿಟ್ಟಿರುವ ಭದ್ರತಾ ಕೊಠಡಿಯನ್ನು ತೆರೆಯಲಾಗುತ್ತದೆ. ಬಳಿಕ 8 ಗಂಟೆಗೆ ಮತ ಎಣಿಕಾ ಕಾರ್ಯ ಆರಂಭಗೊಳ್ಳಲಿದೆ.
::: 20 ಸುತ್ತಿನ ಮತ ಎಣಿಕೆ :::
ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಲ್ಲಿ ತಲಾ 273 ಮತಗಟ್ಟೆಗಳಿದ್ದು, ಇಷ್ಟೇ ಸಂಖ್ಯೆಯ ಮತಯಂತ್ರಗಳನ್ನು ತಲಾ 20 ಸುತ್ತುಗಳಲ್ಲಿ ಎಣಿಕೆ ಮಾಡಲಾಗುತ್ತದೆ.
ಸೇವಾ ಮತದಾರರು- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 2088 ಸೇವಾ ಮತದಾರರ ಪೈಕಿ ಅಂಚೆ ಮೂಲಕ ಮೇ29 ರವರೆಗೆ 1012 ಸ್ವೀಕೃತವಾಗಿದ್ದು, ಈ ಮತದಾರರಿಂದ ಜೂ.4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗುವವರೆಗೆ ಅಂಚೆ ಮೂಲಕ ಸ್ವೀಕೃತವಾಗುವ ಎಲ್ಲಾ ಅಂಚೆ ಮತಗಳನ್ನು ಸ್ವೀಕರಿಸಲಾಗುತ್ತದೆ.
::: ಮತ ಎಣಿಕೆ ಟೇಬಲ್‌ಗಳು :::
ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪ್ರತಿ ಕ್ಷೇತ್ರಕ್ಕೆ 14 ಎಣಿಕೆ ಟೇಬಲ್‌ಗಳನ್ನು ಮತ್ತು ಅಂಚೆ ಮತ ಪತ್ರ ಮತ್ತು ಸೇವಾ ಮತದಾರರ ಅಂಚೆ ಮತಪತ್ರಗಳ ಎಣಿಕೆಗೆ 25 ಟೇಬಲ್‌ಗಳ ವ್ಯವಸ್ಥೆ ಮಾಡಲು ಉದ್ದೇಶಿಸಲಾಗಿದೆ.
::: ಮತ ಎಣಿಕೆ ಏಜೆಂಟರು :::
ಮತಗಳ ಎಣಿಕೆಗಾಗಿ ಎಲ್ಲಾ ಅಭ್ಯರ್ಥಿಗಳು ಟೇಬಲ್‌ಗೆ ಒಬ್ಬರಂತೆ ಎಣಿಕೆ ಏಜೆಂಟರನ್ನು ನೇಮಿಸಬಹುದು. ಈ ಏಜೆಂಟರು ಮತ ಎಣಿಕೆ ಕೇಂದ್ರದಲ್ಲಿ ಅವರಿಗೆ ನಿಯೋಜಿಸಿರುವ ಸ್ಥಳದಲ್ಲಿ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಒಂದು ಟೇಬಲ್‌ಗೆ ಒಬ್ಬರು ಅಭ್ಯರ್ಥಿಯ ಒಬ್ಬ ಏಜೆಂಟ್ ಮಾತ್ರ ಇರಲು ಅವಕಾಶವಿರುತ್ತದೆ.
::: ಮತ ಎಣಿಕೆ ಸಿಬ್ಬಂದಿಗಳು :::
ಇವಿಎಂ ಮತ ಎಣಿಕೆ ಮತ್ತು ಅಂಚೆ ಮತಪತ್ರ, ಇಟಿಪಿಬಿಎಂಎಸ್ ಮತ ಎಣಿಕೆ ಕಾರ್ಯಕ್ಕೆ ಮೀಸಲು ಸಿಬ್ಬಂದಿ ಸೇರಿದಂತೆ 160 ಮತ ಎಣಿಕೆ ಮೇಲ್ವಿಚಾರಕರು, 187 ಮತ ಎಣಿಕೆ ಸಹಾಯಕರು ಮತ್ತು 171 ಮತ ಎಣಿಕೆ ಮೈಕ್ರೋ ಅಬ್ಸರ್‌ವರ್‌ಗಳನ್ನು ನೇಮಕ ಮಾಡಲಾಗಿದೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*