ಮಡಿಕೇರಿ ಮೇ 31 NEWS DESK : ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಜಿಲ್ಲಾ ರೈತ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಕೃಷಿ ಅಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ರೈತ ಮೋರ್ಚಾದ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ರೈತರ ಸಂಕಷ್ಟದ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಆರೋಪಿಸಿದರು.
ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ, ಬಿಜೆಪಿ ಮಡಿಕೇರಿ ನಗರಾಧ್ಯಕ್ಷ ಮನು ಮಂಜುನಾಥ್, ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪ್ರಮುಖರಾದ ತಳೂರು ಕಿಶೋರ್ ಕುಮಾರ್, ರಾಬೀನ್ ದೇವಯ್ಯ, ಜಗದೀಶ್, ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.