ಮಡಿಕೇರಿ ಜೂ.1 NEWS DESK : ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ”ಯನ್ನು ಆಚರಿಸಲಾಯಿತು.
ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಯುವ ಜನತೆ ತಂಬಾಕು ಎನ್ನುವ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳುಮಾಡಿಕೊಳ್ಳದೆ ಉತ್ತಮ ಜೀವನವನ್ನು ನಿರ್ಮಾಣ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಡಾ.ವಿಶಾಲ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯುವಕರು ಹೆಚ್ಚಾಗಿ ತಂಬಾಕುವಿನ ಸೇವನೆ, ದುಶ್ಚಟಗಳಿಗೆ ಮಾರುಹೋಗುತ್ತಿದ್ದು, ಇದರಿಂದ ಅನೇಕ ಅಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ, ತಂಬಾಕನ್ನು ಮಕ್ಕಳಿಂದ ದೂರವಿರಿಸಿ ಮಕ್ಕಳನ್ನು ರಕ್ಷಿಸಿ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕೆ.ಎಂ.ಸತೀಶ್ ಕುಮಾರ್ ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ತೊಂದರೆಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಮತ್ತು ಕೋಟ್ಪಾ ಕಾಯಿದೆ 2003ರ ಬಗ್ಗೆ ಸವಿವರವಾಗಿ ಅಂಕಿ ಅಂಶಗಳ ಸಹಿತ ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಬಿ.ಎಲ್,ಶ್ರೀನಿವಾಸ್ ಮಾತನಾಡಿ, ತಂಬಾಕು ಉತ್ಪನ್ನಗಳ ಸೇವನೆಯಿಂದ ಯುವ ಜನತೆ ದೂರ ಉಳಿದು, ಉತ್ತುಮ ಸಮಾಜ ನಿರ್ಮಿಸಿ ಎಂದು ತಿಳಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಮಾತನಾಡಿ, ತಂಬಕು ಮುಕ್ತ ಕೊಡಗು ಆಗಬೇಕಾದರೆ ಯುವಕ ಪಾತ್ರ ಏನು ಎಂಬುದನ್ನು ವಿವರಿಸಿದರು.
ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ನೋಡೆಲ್ ಅಧಿಕಾರಿ ಡಾ.ರೇವಣ್ಣ ಮಾತನಾಡಿ, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಟಿ.ಎನ್.ಪಾಲಾಕ್ಷ ವಿಶ್ವ ತಂಬಾಕು ರಹಿತ ದಿನದ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಾಥ್ ವಂದಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ತಂಬಾಕಿನಿಂದಾಗುವ ತೊಂದರೆ ಬಗ್ಗೆ ಕಿರು ನಾಟಕ ಪ್ರದರ್ಶಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕರು, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿಗಳು, ವೈದ್ಯಕೀಯ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.