ಸುಂಟಿಕೊಪ್ಪ ಜೂ.1 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕಾನ್‍ಬೈಲ್ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ತಲಾಕಾವೇರಿ ಜ್ಞಾನ ವಿಕಾಸ ತಂಡದ ವತಿಯಿಂದ ಬೀದಿನಾಟಕದ ಮೂಲಕ ಸಾರ್ವಜನಿಕರಿಗೆ ಸಾಮಾಜಿಕ ಅರಿವು ಮೂಡಿಸಲಾಯಿತು.
ನಾಕೂರು-ಶಿರಂಗಾಲ ಗ್ರಾ.ಪಂ ವ್ಯಾಪ್ತಿಯ ಮಂಜಿಕೇರೆ ಸಮುದಾಯ ಭವನದಲ್ಲಿ ತಲಾಕಾವೇರಿ ಜ್ಞಾನವಿಕಾಸ ತಂಡದ ವತಿಯಿಂದ ಬೀದಿನಾಟಕದ ಮೂಲಕ ವೈಯಕ್ತಿಕವಾಗಿ ಆರೋಗ್ಯ ಬಗ್ಗೆ ಕಾಳಜಿ ವಹಿಸುವುದು, ಅಪ್ರಾಪ್ತ ವಯಸ್ಕ ಮಕ್ಕಳಿಗೆ ವಿವಾಹ ನಡೆಸುವುದರಿಂದ ಮುಂದಾಗುವ ದುಷ್ಪಾರಿಣಾಮ, ತಮ್ಮ ಸುತ್ತ ಮುತ್ತಲಿನ ಪರಿಸರ ಸ್ವಚ್ಚತೆ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಆಗುತ್ತಿರುವ ಹಾನಿಕಾರ ಹಾಗೂ ತಮ್ಮ ಸುತ್ತ ಮುತ್ತಲ್ಲಿನಲ್ಲಿ ಹಸಿರು ಪರಿಸರವನ್ನು ಸಂರಕ್ಷಿಸುವ ವಿಚಾರದ ಕುರಿತು ಈ ಭಾಗದ ಜನತೆಯಲ್ಲಿ ಜಾಗೃತಿಯನ್ನು ಮೂಡಿಸಿದರು.
ಗ್ರಾ.ಪಂ ಕಾರ್ಯದರ್ಶಿ ಚಂದ್ರಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಮಾರಂಭದ ವೇದಿಕೆಯಲ್ಲಿ ಕಾನ್‍ಬೈಲ್ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಮೂರ್ತಿ, ಗ್ರಾ.ಪಂ ಸದಸ್ಯೆ ಪ್ರೇಮಾ, ಜ್ಞಾನವಿಕಾಸ ಕೇಂದ್ರ ಸಮನ್ವಯ ಅಧಿಕಾರಿ ಮಾಲಿನಿ, ಒಕ್ಕೂಟದ ಅಧ್ಯಕ್ಷೆ ಖತ್ತೀಜ, ಸೇವಾ ಪ್ರತಿನಿಧಿ ಯಶೋಧ ಬಸವರಾಜ್, ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಕಾನ್‍ಬೈಲ್ ಜ್ಞಾನವಿಕಾಸ ಕೇಂದ್ರ ಸದಸ್ಯರುಗಳು ಹಾಜರಿದ್ದರು.