ಮಡಿಕೇರಿ ಜೂ.2 NEWS DESK : ಪದವೀಧರ ಕ್ಷೇತ್ರದ ಅಭ್ಯರ್ಥಿ ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿಯ ಕ್ರ.ಸಂ 2ಕ್ಕೆ ಮತದಾನ ಮಾಡುವಂತೆ ರಾಜ್ಯದ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಮನವಿ ಮಾಡಿದ್ದಾರೆ. ಜಯದೇವ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ. ಸಿಎನ್ ಮಂಜುನಾಥ್ ಅವರು ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದು, ಡಾ.ಸರ್ಜಿ ಅವರಿಗೆ ಮತದಾನ ಮಾಡುವಂತೆ ನೈರುತ್ಯ ಪದವೀಧರ ಕ್ಷೇತ್ರದ ಪದವೀಧರ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಪದವೀಧರ ಮತದಾರರು ಜೂ.3ರಂದು ನಡೆಯುವ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡಾ.ಧನಂಜಯ ಸರ್ಜಿ ಅವರಿಗೆ ಮತದಾನ ಮಾಡುವ ಮೂಲಕ ವಿಧಾನ ಪರಿಷತ್ತಿನ ಘನತೆ ಗೌರವ ಹೆಚ್ಚಾಗುವಂತೆ ಮಾಡಬೇಕು ಎಂದು ಕೋರಿದ್ದಾರೆ. ಡಾ.ಸಿ.ಎನ್.ಮಂಜುನಾಥ್ ರಾಜ್ಯದ ಖ್ಯಾತ ಹೃದ್ರೋಗ ತಜ್ಞರಾಗಿದ್ದು ಜಯದೇವ ಆಸ್ಪತ್ರೆಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ಹಲವು ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞರಾಗಿದ್ದು, ಹಲವು ಅನಾಥ ಮಕ್ಕಳ ಪಾಲನೆಯನ್ನು ಮಾಡುತ್ತಿದ್ದಾರೆ.









