ಮಡಿಕೇರಿ ಜೂ.2 NEWS DESK : ವಿರಾಜಪೇಟೆಯ ಆಶೀರ್ವಾದ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ವತಿಯಿಂದ ಜೂ.10 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಹಕಾರದೊಂದಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಈವೆಂಟ್ ಐಟಿ, ಇಂಜಿನಿಯರಿಂಗ್, ಮಾರ್ಕೆಟಿಂಗ್, ಹಣಕಾಸು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. 10 ನೇ ತರಗತಿ ಹಾಗೂ ಯಾವುದೇ ವಿದ್ಯಾರ್ಹತೆ ಹೊಂದಿರುವ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ವಿರಾಜಪೇಟೆಯ ಆಶೀರ್ವಾದ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗಲು ಸಂಸ್ಥೆಯ ಸಲಹೆಗಾರರಾದ ಮೇಘ ಮನವಿ ಮಾಡಿದ್ದಾರೆ. ನೋಂದಣಿ ಶುಲ್ಕ ಇರುವುದಿಲ್ಲ, ಹೆಚ್ಚಿನ ಮಾಹಿತಿಗೆ ಮೊ.ಸಂ.70259 94000 ನ್ನು ಸಂಪರ್ಕಿಸಬಹುದಾಗಿದೆ.
ಆಶೀರ್ವಾದ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಕೇರಳ ಮತ್ತು ಕರ್ನಾಟಕದ ಅನೇಕ ಸ್ಥಳಗಳಲ್ಲಿ ಶಾಖೆಗಳನ್ನು ಹೊಂದಿರುವ ಪ್ರಖ್ಯಾತ ಸಂಸ್ಥೆಯಾಗಿದೆ. ಇಲ್ಲಿಯವರೆಗೆ ಐದು ಉದ್ಯೋಗ ಮೇಳವನ್ನು ನಡೆಸಲಾಗಿದ್ದು, ಶೇ.75 ರಷ್ಟು ವಿದ್ಯಾರ್ಥಿಗಳಿಗೆ ಪ್ರಮುಖ ಸಂಸ್ಥೆಗಳಲ್ಲಿ ಉದ್ಯೋಗ ದೊರೆತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.