ಸೋಮವಾರಪೇಟೆ ಜೂ.2 NEWS DESK : ಸಿದ್ಧಲಿಂಗಪುರದ ಅರಸಿನಕುಪ್ಪೆ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ತಾ. 5 ಮತ್ತು 6 ರಂದು ನವ ಚಂಡಿಕಾ ಯಾಗ ನೆರವೇರಿಸಲಾಗುವುದು ಎಂದು ದೇವಾಲಯದ ಚಂಡಿಕಾಯಾಗ ನಿರ್ವಹಣಾ ಸಮಿತಿ ಅಧ್ಯಕ್ಷ ಹೊಸೊಕ್ಲು ಸತೀಶ್ ತಿಳಿಸಿದ್ದಾರೆ.
ಅರಸಿನಕುಪ್ಪೆಯಲ್ಲಿರುವ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ಈಗಾಗಲೇ ನವನಾಗನಾಥ ದೇವಾಲಯ ನಿರ್ಮಾಣಗೊಂಡಿದ್ದು, ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಎನ್.ಎಂ. ಮುತ್ತಪ್ಪ ಹಾಗೂ ಗೌರವಾಧ್ಯಕ್ಷರಾಗಿ ಎನ್.ಎಂ. ಮುದ್ದಪ್ಪ ಅವರುಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ಷೇತ್ರದ ಪ್ರಧಾನ ಗುರುಗಳಾದ ಶ್ರೀರಾಜೇಶ್‌ನಾಥ್ ಜೀ ಅವರ ಮಾರ್ಗದರ್ಶನದಲ್ಲಿ, ಪ್ರಧಾನ ಅರ್ಚಕ ಜಗದೀಶ್ ಉಡುಪ ಅವರ ಪೌರೋಹಿತ್ಯದಲ್ಲಿ ಪ್ರತಿ 15 ದಿನಗಳಿಗೊಮ್ಮೆ ಪಂಚಮಿ ಪೂಜೆ, ವಾರ್ಷಿಕ ಮಹಾಶಿವರಾತ್ರಿ ಉತ್ಸವ, ಯುಗಾದಿ, ಧನುರ್‌ಮಾಸದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ ಎಂದರು.
ಇದೇ ಪ್ರಥಮ ಬಾರಿಗೆ ಕ್ಷೇತ್ರದಲ್ಲಿ ಲೋಕ ಕಲ್ಯಾಣಾರ್ಥ ನವ ಚಂಡಿಕಾಯಾಗ ಆಯೋಜಿಸಿದ್ದು, ಎರಡು ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿವೆ. ತಾ. 5 ರಿಂದ ಶ್ರೀ ರಾಜೇಶ್‌ನಾಥ್ ಜೀ ಅವರ ಮಾರ್ಗದರ್ಶನದಂತೆ ಬೆಂಗಳೂರಿನ ಕೇಶವ ಅಡಿಗ ಅವರ ನೇತೃತ್ವದಲ್ಲಿ, ಕ್ಷೇತ್ರದ ಅರ್ಚಕರಾದ ಜಗದೀಶ್ ಉಡುಪ ಅವರ ಪೌರೋಹಿತ್ಯದಲ್ಲಿ ಮೃತ್ಯುಂಜಯ ಹೋಮ ಸಹಿತ ನವ ಚಂಡಿಕಾ ಯಾಗ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಾ. 5ರಂದು ಬೆಳಿಗ್ಗೆ 8 ಗಂಟೆಯಿAದ ಮಹಾಗಣಪತಿ ಹೋಮ, ಅಭಿಷೇಕಾಧಿಗಳು, ಅಲಂಕಾರ ಪೂಜೆಗಳು, ಮಹಾ ಮೃತ್ಯುಂಜಯ ಹೋಮ, ಪ್ರಸಾದ ವಿತರಣೆ, ಭಕ್ತಾದಿಗಳಿಗೆ ಅನ್ನ ಸಂತರ್ಪಣೆ, ಸಂಜೆ 5 ಗಂಟೆಯಿಂದ ಚಂಡಿಕಾ ಪಾರಾಯಣ, ದುರ್ಗಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದರು.
ತಾ. 6 ರಂದು ಬೆಳಿಗ್ಗೆ 8.30ರಿಂದ ನವ ಚಂಡಿಕಾ ಯಾಗದ ಅಂಗವಾಗಿ ಗಣಪತಿ ಹೋಮ, ರುದ್ರಾಭಿಷೇಕ, ಮೃತ್ಯುಂಜಯ ಹೋಮ, ದುರ್ಗಾಪೂಜೆ, ಶ್ರೀ ಚಂಡಿಕಾ ಪಾರಾಯಣ, ನವ ಚಂಡಿಕಾ ಹೋಮ, ಅಲಂಕಾರ ಸೇವೆ, ಅನ್ನಸಂತರ್ಪಣೆ ನೆರವೇರಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 8762212946 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಹೊಸೊಕ್ಲು ಸತೀಶ್ ಮಾಹಿತಿ ನೀಡಿದರು.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*