ಮಡಿಕೇರಿ ಜೂ.2 NEWS DESK : ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಇಂಜಲಗೆರೆ ಗ್ರಾಮದಲ್ಲಿ ನಡೆದಿದೆ.
ಕಾಡಾನೆ ದಾಳಿಯಲ್ಲಿ ಸಿಬ್ಬಂದಿ ಮುರುಗ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ವಿರಾಜಪೇಟೆ ಆಸಪತ್ರೆಯಲ್ಲಿ ದಾಖಲಿಸಲಾಗಿದೆ. ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಕಾಫಿತೋಟದಲ್ಲಿ ಬೀಡುಬಿಟ್ಟ 12 ಕಾಡಾನೆಗಳ ಹಿಂಡನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆಯೇ ವನ್ಯಜೀವಿಗಳು ದಾಳಿ ಮಾಡಿವೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಣ್ಯ ಅಧಿಕಾರಿಗಳು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಗ ಅವರ ಆರೋಗ್ಯ ವಿಚಾರಿಸಿದರು.










