ಮಡಿಕೇರಿ ಜೂ.3 NEWS DESK : ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಮತ್ತು ದೈಹಿಕ ಶಿಕ್ಷಣ ವಿಭಾಗ ಬಿ.ಎಸ್.ಹೆಚ್ ವತಿಯಿಂದ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಗೆ 15 ದಿನಗಳ ಕಾಲ ಉಚಿತ ಟೇಬಲ್ ಟೆನ್ನಿಸ್ ಮತ್ತು ಚೆಸ್ ತರಬೇತಿ ಶಿಬಿರ ನಡೆಯಿತು.
ಶಿಬಿರದಲ್ಲಿ ಜಿಲ್ಲೆಯ ಸುಮಾರು 48 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ಜಿ.ಎಂ.ದೇವಗಿರಿ, ಶಿಸ್ತುಬದ್ಧ ಜೀವನಕ್ಕೆ ಕ್ರೀಡೆ ಸಹಕಾರಿ ಎಂದರು.
ಶಿಬಿರವನ್ನು ಸಹಾಯಕ ಪ್ರಾಧ್ಯಾಪಕ ಡಾ. ಕೆ.ಎ.ಈಶ್ವರ್ ಆಯೋಜಿಸಿದರು.