ಮಡಿಕೇರಿ ಜೂ.3 NEWS DESK : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಗ್ರಾಮಾತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಾದ ಅಭ್ಯತ್ ಮಂಗಲ ನಿವಾಸಿ ಪ್ರಶಾಂತ್.ಹೆಚ್.ಕೆ (32) ಹಾಗೂ ಎಂ.ಬಾಡಗ ನಿವಾಸಿ ಬೋಪಯ್ಯ ಎ.ಎಸ್ (31) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. 419.93 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಿದ 2 ಮೊಬೈಲ್ ಮತ್ತು 1 ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಮೂರ್ನಾಡು ನಗರದ ಕುಂಬಳದಾಳು ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸರಬರಾಜು ಮತ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳಿ ನಡೆಸಿದರು.
ಮಡಿಕೇರಿ ಉಪವಿಭಾಗದ ಡಿವೈಎಸ್‍ಪಿ ಮಹೇಶ್ ಕುಮಾರ್, ಮಡಿಕೇರಿ ಗ್ರಾಮಾಂತರ ಪಿಐ ಉಮೇಶ್.ಯು, ಪಿಎಸ್‍ಐಗಳಾದ ಶ್ರೀನಿವಾಸಲು, ರಮೇಶ್ ಕರಕಿಕಟ್ಟಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ತನಿಖೆ ನಡೆಸಿ ಕಾರ್ಯಾಚರಣೆ ನಡೆಸಿತು.
ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
::: ವಿಶೇಷ ಸೂಚನೆ :::
ಯುವಕ-ಯುವತಿಯರು ಮಾದಕ ವೈಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ವ್ಯಕ್ತಿಗಳ ಕುರಿತು ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಎಸ್‍ಪಿ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.