ಮಡಿಕೇರಿ ಜೂ.3 NEWS DESK : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದಾದರೂ ನೆರೆ ಹಾವಳಿಯಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದರೆ ಸಾರ್ವಜನಿಕರ ಸಹಾಯಕ್ಕೆ ಧಾವಿಸಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಡಿಎಆರ್, ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ಉಪ ವಿಭಾಗಗಳ ತಲಾ 15 ಸಿಬ್ಬಂದಿಗಳನ್ನೊಳಗೊಂಡ 4 ವಿಪತ್ತು ನಿರ್ವಹಣಾ ತಂಡವನ್ನು ರಚಿಸಲಾಗಿದ್ದು, ಈ ತಂಡಗಳಿಂದ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ರಕ್ಷಣಾ ಕಾರ್ಯಾಚರಣೆಯ ಅಭ್ಯಾಸವನ್ನು ನಡೆಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನೇತೃತ್ವದಲ್ಲಿ ನಡೆದ ಅಭ್ಯಾಸ ಕಾರ್ಯಾಚರಣೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿ಼ಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್, ಕುಶಾಲನಗರ ವೃತ್ತ ನಿರೀಕ್ಷಕ ಕೆ.ರಾಜೇಶ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.