ಮಡಿಕೇರಿ ಜೂ.3 NEWS DESK : ನೈಋತ್ಯ ಪದವೀದರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಗೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಶಾಂತಿಯುತ ಮತದಾನ ನಡೆಯಿತು. ನೈಋತ್ಯ ಪದವೀಧರ ಕ್ಷೇತ್ರದ ಕೊಡಗಿನ 3909 ಮತದಾರರಲ್ಲಿ 3170 ಮಂದಿ ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಶೇ.81.09 ಮತದಾನ ದಾಖಲಾಗಿದೆ. ಶಿಕ್ಷಕರ ಕ್ಷೇಢತ್ರದ 1578 ಮತದಾರರಲ್ಲಿ 1371 ಮಂದಿ ಮತ ಚಲಾಯಿಸುವ ಮೂಲಕ ಶೇ.86.88 ಮತದಾನವಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ, ತಾಲ್ಲೂಕು ಕೇಂದ್ರಗಳಾದ ವಿರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ ಮತ್ತು ಕುಶಾಲನಗರದಲ್ಲಿ ವ್ಯವಸ್ಥೆಮಾಡಲಾಗಿದ್ದ ಮತಗಟ್ಟೆಗಳಲ್ಲಿ ಇಂದು ಬೆಳಗ್ಗಿನಿಂದಲೆ ಶಿಕ್ಷಕರು ಮತ್ತು ಪದವೀಧರರು ಸರದಿಯ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತದಾನ ಮಾಡುತ್ತಿದ್ದುದು ಗೋಚರಿಸಿತು. ಮಡಿಕೇರಿಯ ನಗರಸಭಾ ಕಚೇರಿಯಲ್ಲಿ ವ್ಯವಸ್ಥೆ ಮಾಡಿದ್ದ ಪದವೀಧರರ ಕ್ಷೇತ್ರದ ಚುನಾವಣಾ ಮತಗಟ್ಟೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯ್ತಿ ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಒಟ್ಟಾಗಿ ಬಂದು ಸರದಿಯ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದು ವಿಶೇಷವಾಗಿತ್ತು. ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್ ಅವರು ಇಂದು ಬೆಳಗ್ಗೆ ಕುಶಾಲನಗರ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಮಡಿಕೇರಿಯ ನಗರಸಭೆಯ ಪದವೀಧರ ಕ್ಷೇತ್ರದ ಮತಗಟ್ಟೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು. ಉತ್ಸಾಹದ ಮತದಾನ-ನೈಋತ್ಯ ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 10 ಗಂಟೆಯ ಹೊತ್ತಿಗೆ ಶೇ.20.08 ಉತ್ಸಾಹದ ಮತದಾನ ನಡೆಯಿತು. ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಮತದಾನದ ಪ್ರಮಾಣ ಶೇ.62.42 ರಷ್ಟಿತ್ತು. ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೆಳಗ್ಗೆ 10 ಗಂಟೆಗೆ ಮತದಾನದ ಪ್ರಮಾಣ 22.68 ರಷ್ಟಿದ್ದರೆ, ಮಧ್ಯಾಹ್ನ 12 ಗಂಟೆಗೆ ಶೇ.47.28 ಮತ್ತು ಮಧ್ಯಾಹ್ನ 2 ಗಂಟೆಗೆ ಈ ಪ್ರಮಾಣ ಶೇ.66.41 ರಷ್ಟಾಗಿತ್ತು. ಬಿಗಿ ಭದ್ರತೆ- ವಿಧಾನ ಪರಿಷತ್ ಚುನಾವಣೆಯ ಮತಗಟ್ಟೆಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಜಿಲ್ಲಾಧಿಕಾರಿಗಳ ಸಂತಸ- ಮಡಿಕೇರಿ ನಗರಸಭಾ ಕಚೇರಿಯಲ್ಲಿನ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಜಿಲ್ಲಾ ವ್ಯಾಪ್ತಿಯಲ್ಲಿ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದ ಚುನಾವಣೆಗೆ ಉತ್ಸಾಹದಿಂದ ಶಿಕ್ಷಕರು ಮತ್ತು ಪದವೀಧರರು ಮತದಾನ ಮಾಡುತ್ತಿರುವುದು ಸಂತಸ ತಂದಿದೆ. ಪದವೀಧರ ಕ್ಷೇತ್ರದ ಚುನಾವಣೆಗೆ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ತಾನು ಮತದಾನ ಮಾಡುತ್ತಿದ್ದು, ಇದು ಹೆಮ್ಮೆ ಮತ್ತು ಸಂತೋಷವನ್ನು ಉಂಟುಮಾಡಿದೆಯೆಂದು ತಿಳಿಸಿದರು. ಪಕ್ಷಗಳಿಂದ ಮತಯಾಚನೆ- ಜಿಲ್ಲಾ ಕೇಂದ್ರ‍್ರ ಮಡಿಕೆರಿಯ ನಗರಸಭಾ ಕಛೇರಿಯ ಮತಗಟ್ಟೆಯ ಹೊರ ಭಾಗದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಬಿಜೆಪಿ ಪ್ರಮುಖರು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡುತ್ತಿದ್ದುದು ಕಂಡು ಬಂತು. ಕುಶಾಲನಗರ-ಕುಶಾಲನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಶಿಕ್ಷಕರ ಕ್ಷೇತ್ರದ ಮತದಾನ ಶೇ.89.32 ರಷ್ಟು ನಡೆದಿದೆ. ಪದವೀದರ ಕ್ಷೇತ್ರದಲ್ಲಿ ಶೇ.77.48 ರಷ್ಟು ಮತದಾನ ಆಗಿದೆ. ಶಾಸಕ ಡಾ.ಮಂತರ್ ಗೌಡ, ಮಾಜಿ ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್ ಹಾಗೂ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರುಗಳು ಮತಗಟ್ಟೆಯ ಹೊರ ಭಾಗದಲ್ಲಿ ಮತಯಾಚಿಸುತ್ತಿದ್ದ ದೃಶ್ಯ ಕಂಡು ಬಂತು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*