ಕುಶಾಲನಗರ ಜೂ.4 NEWS DESK : ಕೊಡಗು ಅಂಚೆ ಇಲಾಖೆಯ ನೌಕರರ ಆಶ್ರಯದಲ್ಲಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಪ್ರಶಸ್ತಿಯನ್ನು ಸೋಮವಾರಪೇಟೆ ಉಪ ವಿಭಾಗ ತಂಡ ತನ್ನದಾಗಿಸಿಕೊಂಡಿದ್ದು, ಮಡಿಕೇರಿ ಉಪ ವಿಭಾಗ ತಂಡ ದ್ವಿತೀಯ ಸ್ಥಾನ ಪಡೆಯಿತು.
ಸ್ಥಳೀಯ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯ ಅಂಚೆ ವಿಭಾಗದ ಮೂರು ಉಪವಿಭಾಗ ಮತ್ತು ಪ್ರಧಾನ ಅಂಚೆ ಕಚೇರಿ ಸೇರಿದಂತೆ ಒಟ್ಟು ನಾಲ್ಕು ತಂಡಗಳು ಪಾಲ್ಗೊಂಡಿದವು.
ಹಾಸನ ಅಂಚೆ ವಿಭಾಗದ ಉಪ ಅಧೀಕ್ಷಕರಾದ ಹೆಚ್.ಸೋಮಯ್ಯ ಪಂದ್ಯಾವಳಿಗೆ ಚಾಲನೆ ನೀಡಿದರು. ಮಡಿಕೇರಿ ಅಂಚೆ ನಿರೀಕ್ಷಕರಾದ ಬಿ.ಡಿ.ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಪಂದ್ಯ ಪುರುಷೋತ್ತಮರಾಗಿ ಶಿವಕುಮಾರ್, ಉತ್ತಮ ತಂಡವಾಗಿ ಮಡಿಕೇರಿ ಉಪ ವಿಭಾಗ ಪ್ರಶಸ್ತಿ ಪಡೆದುಕೊಂಡಿತು. ಪಂದ್ಯಾವಳಿಯಲ್ಲಿ ಮಡಿಕೇರಿ ಪ್ರಧಾನ ಕಚೇರಿಯ ಪ್ರಮುಖರಾದ ಬೇಬಿ ಜೋಸೆಫ್, ಸಿಎಲ್ ಮಹೇಶ್, ಸಂದೀಪ್, ಸೋಮಪ್ಪ, ವಿರಾಜಪೇಟೆ ಉಪವಿಭಾಗದ ಮಂಜು, ಶಫೀರ್, ಸತ್ಯ ಪ್ರಸನ್ನ, ಸೋಮವಾರಪೇಟೆ ಉಪವಿಭಾಗದ ಉಪ ಅಧೀಕ್ಷಕ ಶಿವಕುಮಾರ್, ಅಶೋಕ್, ಎಂ.ಎಸ್.ಮಂಜುನಾಥ್ , ಭಾಸ್ಕರ್ ಗಾಡ್ವಿನ್, ಮನೋಜ್ ಮತ್ತಿತರರು ಇದ್ದರು.