ಮಡಿಕೇರಿ ಜೂ.4 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ವಿರುದ್ಧ 139262 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಯದುವೀರ್ ಒಡೆಯರ್ ಅವರು ಒಟ್ಟು 795503 ಮತಗಳನ್ನು ಪಡೆದರೆ ಲಕ್ಷ್ಮಣ್ ಅವರು 656241 ಮತಗಳನ್ನಷ್ಟೇ ಪಡೆಯಲು ಶಕ್ತರಾದರು. ಮತ ಎಣಿಕೆಯ ಎಲ್ಲಾ ಸುತ್ತುಗಳಲ್ಲಿ ಯದುವೀರ್ ಮುನ್ನಡೆಯನ್ನು ಕಾಯ್ದುಕೊಂಡರು. ಕೊಡಗು ಜಿಲ್ಲೆಯಲ್ಲಿ ಯದುವೀರ್ ಅವರಿಗೆ ಸುಮಾರು 73859 ಮತಗಳು ಲೀಡ್ ದೊರೆತ್ತಿದೆ. ಕಳೆದ ಚುನಾವಣೆಯಲ್ಲಿ ಕೊಡಗು ಪ್ರತಾಪ್ ಸಿಂಹ ಅವರಿಗೆ ಸುಮಾರು 85 ಸಾವಿರ ಮತಗಳನ್ನು ಲೀಡ್ ನೀಡಿತ್ತು. ಪ್ರತಾಪ್ ಸಿಂಹ ಅವರು ಕಳೆದ ಬಾರಿ 138647 ಮತಗಳ ಅಂತರದಿಂದ ಕಾಂಗ್ರೆಸ್ ನ ವಿಜಯಶಂಕರ್ ಅವರ ವಿರುದ್ಧ ಗೆಲುವು ದಾಖಲಿಸಿದ್ದರು. ಯದುವೀರ್ ಅವರ ಗೆಲುವಿನಿಂದ ಕೊಡಗು ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು- ಕೊಡಗು ಪ್ರತಿಷ್ಠೆಯ ಕ್ಷೇತ್ರವಾಗಿತ್ತಾದರೂ ಗೆದ್ದು ಬೀಗಲು ಸಾಧ್ಯವಾಗಿಲ್ಲ.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*