Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
  • *ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*
  • *ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ*
  • *ಸಾಧನೆಯ ಹಾದಿಯಲ್ಲಿ ಸರ್ಕಾರಿ ಪ್ರೌಢಶಾಲೆ ಮೂರ್ನಾಡು*
  • *15 ಕೆ.ಜಿ ಗಾಂಜಾ ಸಹಿತ ಒರಿಸ್ಸಾದ ಆರೋಪಿಗಳ ಬಂಧನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ಗೆಲುವು ಸಾಧಿಸಿದ ತಂಡಗಳು*
  • *ಮೇ 5 ರಂದು ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿತ ಫೈರಿಂಗ್ ರೇಂಜ್ ಉದ್ಘಾಟನೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಸಮಾರೋಪ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯ : ಮಣವಟ್ಟಿರ ಮತ್ತು ಮುಕ್ಕಾಟಿರ ಹಾಗೂ ಚೆಕ್ಕೇರ ಮತ್ತು ಮಾಳೇಟಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡಲು ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡಲು ಸಲಹೆ*

ಜೂನ್ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.4 NEWS DESK : ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು, ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.
ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದ ಈ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ ಹಿಂಡಿ ಮತ್ತಿತರ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿದೆ.
ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ, ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ. ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ 5:3:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಲು ಪೊಟ್ಯಾಷ್ ಯುಕ್ತ ಸಂಯುಕ್ತ ರಸಗೊಬ್ಬರಗಳ ಬಳಕೆಯನ್ನು ಪ್ರೇರೇಪಿಸುವುದು ಮುಖ್ಯವಾಗಿರುತ್ತದೆ.
ಅಲ್ಲದೆ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಷ್ ಒದಗಿಸುವ ಇತರೆ ಸಂಯುಕ್ತ (ಕಾಂಪ್ಲೆಕ್ಸ್) ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 14:35:14, 17:17:17, 14:28:14, 19:19:19, 20:10:10 ಮತ್ತಿತರ ರಸಗೊಬ್ಬರಗಳನ್ನೂ ಸಹ ಬಳಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026

*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಮಡಿಕೇರಿ ಏ.29 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಇದರ ವತಿಯಿಂದ 54ನೇ ವರ್ಷದ…

*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*

ಏಪ್ರಿಲ್ 29, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ*

ಏಪ್ರಿಲ್ 29, 2026

*ಸಾಧನೆಯ ಹಾದಿಯಲ್ಲಿ ಸರ್ಕಾರಿ ಪ್ರೌಢಶಾಲೆ ಮೂರ್ನಾಡು*

ಏಪ್ರಿಲ್ 29, 2026

*15 ಕೆ.ಜಿ ಗಾಂಜಾ ಸಹಿತ ಒರಿಸ್ಸಾದ ಆರೋಪಿಗಳ ಬಂಧನ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 29, 2026

*ಮೇ 5 ರಂದು ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿತ ಫೈರಿಂಗ್ ರೇಂಜ್ ಉದ್ಘಾಟನೆ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಸಮಾರೋಪ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯ : ಮಣವಟ್ಟಿರ ಮತ್ತು ಮುಕ್ಕಾಟಿರ ಹಾಗೂ ಚೆಕ್ಕೇರ ಮತ್ತು ಮಾಳೇಟಿರ*

ಏಪ್ರಿಲ್ 29, 2026

*ಮೇ 5ರಂದು ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.