ಮಡಿಕೇರಿ ಜೂ.4 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ವಕೀಲರ ಸಂಘ, ಮಡಿಕೇರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಜೂ.5 ರಂದು ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ‘ಭೂ ಮರುಸ್ಥಾಪನೆ, ಮರು ಭೂಮೀಕರಣ ಹಾಗೂ ಬರ ತಡೆಯುವಿಕೆ’ ವಿಷಯದಡಿ ಕಾರ್ಯಕ್ರಮ ನಡೆಯಲಿದೆ.
ಜೂ.5 ರಂದು ಬೆಳಗ್ಗೆ 9.30 ಗಂಟೆಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಾಥಾ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮಿ, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್ ಪಾಲ್ಗೊಳ್ಳಲಿದ್ದಾರೆ.
ನಂತರ ಬೆಳಗ್ಗೆ 11.30 ಗಂಟೆಗೆ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ.