ಕೊಳ್ಳೇಗಾಲ ಜೂ.5 NEWS DESK : ಕಾಮಗೆರೆಯ ಸಂತ ಫ್ರಾನ್ಸಿಸ್ ಕ್ಷೇವಿಯರ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಜಾಗೃತಿ ಜಾಥಾ ನಡೆಯಿತು.
ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ರೆ.ಫಾ.ಐಸಾಕ್ ರತ್ನಾಕರ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದ್ದು, ವಿದ್ಯಾರ್ಥಿಗಳು ಸಾರ್ವಜನಿಕ ಜಾಗೃತಿಯನ್ನು ಮೂಡಿಸಿ ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆ ಮೂಡಿಸಬೇಕೆಂದು ಹೇಳಿದರು.
ಜಾಥಾವು ಕಾಮಗೆರೆ ಗ್ರಾಮದಾದ್ಯಂತ ಸಾಗಿ ಘೋಷಣೆಗಳನ್ನು ಕೂಗುವುದರ ಮೂಲಕ ಸಾರ್ವಜನಿಕ ಜಾಗೃತಿ ಮೂಡಿಸುವ ಪ್ರಯತ್ನವನ್ನು ಶಾಲಾ ಮಕ್ಕಳು ಮಾಡಿದರು. ನಂತರ ಶಾಲೆಯಲ್ಲಿ ಗಿಡವನ್ನು ನೆಟ್ಟು ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಪಣತೊಡಬೇಕೆಂದರು.
ಈ ಸಂದರ್ಭ ಮುಖ್ಯ ಶಿಕ್ಷಕ ಅಂತೋಣಿರಾಜ್, ಶಿಕ್ಷಕರು, ಸಿಬ್ಬಂದಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳು ಹಾಜರಿದ್ದರು.