ವಿರಾಜಪೇಟೆ ಜೂ.5 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ವಿರಾಜಪೇಟೆ ತಾಲೂಕು ಕಾನೂರು ವಲಯ ಬ್ರಹ್ಮಗಿರಿ ಕಾರ್ಯ ಕ್ಷೇತ್ರದ ತ್ರೈಮಾಸಿಕ ಒಕ್ಕೂಟ ಸಭೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯ ವೈಧ್ಯರಾದ ಶರತ್ ಮಾತನಾಡಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು, ಕ್ಯಾನ್ಸರ್ ಕಾಯಿಲೆಗಳು, ಸ್ತ್ರೀಯರಲ್ಲಿ ಉಂಟಾಗುವ ದುಷ್ಪರಿಣಾಮಗಳು ಹಾಗೂ ಅದರಿ0ದ ಹಂತ ಹಂತವಾಗಿ ಹೊರಗೆ ಬರಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ವಲಯ ಮೇಲ್ವಿಚಾರಕರಾದ ಸುಜೀರ್ ಕುಲಾಲ್ ಯೋಜನೆಯ ಕಾರ್ಯಕ್ರಮಗಳು ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು.
ಒಕ್ಕೂಟ ಅಧ್ಯಕ್ಷರಾದ ಸುನೀತ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿ ಮುತ್ತಪ್ಪ, ದಿವ್ಯ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಹಾಜರಿದ್ದರು.