ಮಡಿಕೇರಿ ಜೂ.5 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿರಾಜಪೇಟೆ ಪ್ರಾದೇಶಿಕ ಅರಣ್ಯ ವಲಯ, ವಿರಾಜಪೇಟೆ ವಿಭಾಗದ ವತಿಯಿಂದ ಜಯಪ್ರಕಾಶ ನಾರಾಯಣ ಪ್ರೌಢಶಾಲೆಯ ಲೋಟಸ್ ಇಕೋ ಕ್ಲಬ್ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಜಾಗೃತಿ ಮೂಡಿಸಲಾಯಿತು.
ಶಾಲೆಯ ಹೊರ ಆವರಣದಲ್ಲಿ ಅರಣ್ಯ ಇಲಾಖೆಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಗಿಡಗಳನ್ನು ನೆಡುವುದರ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭ ವಿರಾಜಪೇಟೆ ಡಿ.ಸಿ.ಎಫ್. ಜಗನಾಥ್ ಎನ್.ಎಚ್, ಎಸಿಎಫ್ ನೆಹರು ಕೆ.ಎ, ಪ್ರೊಬೇಷನರಿ ಎಸಿಎಫ್ ಕುಮಾರಿ ಮಹಾಲಕ್ಷ್ಮಿ, ಆರ್.ಎಫ್.ಓ ಕೆ.ಎಂ.ದೇವಯ್ಯ, ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ರಾಜೇಗೌಡ, ವಿರಾಜಪೇಟೆ ಅರಣ್ಯ ಇಲಾಖೆ ಸಿಬ್ಬಂದಿಗಳು, ಜಯಪ್ರಕಾಶ ನಾರಾಯಣ ಪ್ರೌಢಶಾಲೆಯ ಶಿಕ್ಷಕರುಗಳು, ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಇದ್ದರು.