ಮೈಸೂರು ಜೂ.5 : ಮೈಸೂರು ಕೊಡಗು ನೂತನ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಸಂಜೆ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ದರ್ಶನಾಶಿರ್ವಾದ ಪಡೆದರು. ಈ ಸಂದರ್ಭ ಮೈಸೂರು ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾಧ ಎಲ್ಆರ್ ಮಹಾದೇವಸ್ವಾಮಿ ಹಾಗೂ ಶ್ರೀ ಮಠದ ಭಕ್ತರು ಉಪಸ್ತಿತರಿದ್ದರು.









