ಬೆಂಗಳೂರು ಜೂ.6 NEWS DESK : ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕನ್ನಡಿಗರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಹವಾಮಾನ ವೈಪರಿತ್ಯದಿಂದಾಗಿ 20 ಚಾರಣಿಗರಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್ ನಿಂದ ಸಹಸ್ರತಾಲ್ ಗೆ ತೆರಳಿದ್ದ 20 ಮಂದಿಯ ತಂಡ ಚಾರಣದ ಗುರಿ ತಲುಪಿ ನಂತರ ಮರಳುತ್ತಿದ್ದಾಗ ಹಿಮಗಾಳಿ ಬೀಸಿ ಹಿಮಪಾತವಾಗಿದೆ. ಈ ಸಂದರ್ಭ 9 ಚಾರಣಿಗರು ಸಾವನ್ನಪ್ಪಿದ್ದಾರೆ. ಕನ್ನಡಿಗರ ರಕ್ಷಣೆಯ ಬಗ್ಗೆ ಕ್ರಮ ಕೈಗೊಳ್ಳಲು ಮತ್ತು ಮೃತದೇಹ ತರಲು ಸಚಿವ ಕೃಷ್ಣಬೈರೇಗೌಡ ಅವರು ಉತ್ತರಾಖಂಡಕ್ಕೆ ಭೇಟಿ ನೀಡಿದ್ದಾರೆ. ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ರಾಧಾ ರಾತುರಿ ಹಾಗೂ ವಿಪತ್ತು ನಿರ್ವಹಣೆಯ ಕಾರ್ಯದರ್ಶಿ ರಂಜಿತ್ ಸಿನ್ಹಾ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.









