ನಾಪೋಕ್ಲು ಜೂ.6 NEWS DESK : ನಾಪೋಕ್ಲುವಿನ ವಿವಿಧ ಶಾಲೆಗಳಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆ, ಕಕ್ಕಬ್ಬೆ ಪ್ರೌಢಶಾಲೆ, ಬೆಟ್ಟಗೇರಿಯ ಉದಯ ಪ್ರೌಢಶಾಲೆ, ಸ್ಥಳೀಯ ಕೆಪಿಎಸ್ ಶಾಲೆ ಸೇರಿದಂತೆ ವಿವಿಧ ಶಾಲೆಗಳಲ್ಲಿ ಹಲಸು, ನೆಲ್ಲಿ, ರಾಮಫಲ, ನೇರಳೆ, ಜಂಬೂ ನೇರಳೆ ಇತ್ಯಾದಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು.
ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜು, ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಜಂಟಿಯಾಗಿ ಪರಿಸರ ದಿನಾಚರಣೆ ಆಚರಿಸಲಾಯಿತು ಮತ್ತು ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಂಚಾಲಕ ಶಂಕರನಾರಯಣ ಭಟ್ ಮತ್ತು ಪ್ರಾಂಶುಪಾಲರು, ಉಪನ್ಯಾಸ ವರ್ಗದವರು, ಮುಖ್ಯ ಶಿಕ್ಷಕರು, ಅಧ್ಯಾಪಕವೃಂದದವರು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.