ಮಡಿಕೇರಿ ಜೂ.6 NEWS DESK : ವಿಶ್ವ ಪರಿಸರ ದಿನದ ಅಂಗವಾಗಿ ವಿರಾಜಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅಭಿವೃದ್ದಿಗೊಂಡ ಅಮೃತ್ ಸರೋವರ ಕೆರೆಗಳ ದಡದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮನರೇಗಾ ಸಹಾಯಕ ನಿರ್ದೇಶಕರಾದ ಎಂ.ಡಿ.ಶ್ರೀನಿವಾಸ್ ಗಿಡಗಳನ್ನು ಸಾಂಕೇತಿಕವಾಗಿ ನೆಡುವುದರ ಮೂಲಕ ಚಾಲನೆ ನೀಡಿ, ನೀರಿನ ಸಂರಕ್ಷಣೆ ಹಾಗೂ ಉಳಿವಿಗಾಗಿ ಮನರೇಗಾ ಯೋಜನೆಯಡಿ ಕೆರೆಗಳನ್ನು ಅಭಿವೃದ್ದಿಪಡಿಸಲಾಗಿದೆ. ಕೆರೆಗಳ ದಡದಲ್ಲಿ ಅಲಂಕಾರಿಕ ಹಾಗೂ ನೆರಳು ನೀಡುವ ಸಸಿಗಳನ್ನು ಬೆಳೆಸುವುದು ಸೂಕ್ತವಾಗಿದೆ ಎಂದು ತಿಳಿಸಿದರು.
ಈ ಸಂದರ್ಭ ಹುದಿಕೇರಿ ಅಧ್ಯಕ್ಷರಾದ ಕಾವೇರಮ್ಮ, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಾದ ಅನೀಲ್, ತಾಂತ್ರಿಕ ಸಹಾಯಕ ಅಭಿಯಂತರರಾದ ನಿರಂಜನ್, ಹೇಮಂತ್, ತಾಲ್ಲೂಕು ಸಂಯೋಜಕರಾದ ನರೇಂದ್ರ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.