ಮಡಿಕೇರಿ ಜೂ.6 NEWS DESK : ಮೈಸೂರು ಸಂಸ್ಥಾನದಲ್ಲಿ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ವತಿಯಿಂದ ಸರಳವಾಗಿ ಆಚರಿಸಲಾಯಿತು.
ನಗರದ ಜಿಲ್ಲಾ ಕಸಾಪ ಕಚೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಕಸಾಪ ಪದಾಧಿಕಾರಿಗಳು ಪುಷ್ಪಾರ್ಚನೆ ನೆರವೇರಿಸಿ ಗೌರವ ಅರ್ಪಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಕನ್ನಡ, ನಾಡು-ನುಡಿಗೆ ಮೈಸೂರು ಸಂಸ್ಥಾನದಲ್ಲಿ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ ಎಂದು ಕೊಂಡಾಡಿದರು.
ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಹೆಚ್ಚಿನ ಕಾಳಜಿ ವಹಿಸಿ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ ಎಂದು ಟಿ.ಪಿ.ರಮೇಶ್ ವಿವರಿಸಿದರು.
ಸರ್ವರಿಗೂ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶ್ರಮಿಸಿದ್ದಾರೆ. ರಾಜರ ಆಡಳಿತದ ಮೂಲಕ ಜನಸಾಮಾನ್ಯರ ಬದುಕಿಗೆ ಸಾಧ್ಯವಾದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಇಂದಿಗೂ ಸಹ ಜನಮನದಲ್ಲಿ ಉಳಿದಿದ್ದಾರೆ ಎಂದು ನುಡಿದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿ, ನಾಡಿನ ಸಂಸ್ಕೃತಿ, ಕಲೆ, ಪರಂಪರೆ ಉಳಿಸಿ ಬೆಳೆಸಲು ನಾಲ್ವಡಿ ಕೃಷ್ಣರಾಜ ಒಡೆಯರ್ ಶ್ರಮಿಸಿದ್ದಾರೆ ಎಂದರು.
ಮಡಿಕೇರಿ ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ, ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿದ ರುವಾರಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಲ್ಲುತ್ತದೆ ಎಂದರು.
ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ನಿಕಟ ಅಧ್ಯಕ್ಷ ಅಂಬೆಕಲ್ಲು ನವೀನ್ ಮಾತನಾಡಿದರು.
ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ಸಂಪತ್ ಕುಮಾರ್, ಕಸಾಪ ಕುಶಾಲನಗರ ತಾಲ್ಲೂಕು ಘಟಕದ ಅಧ್ಯಕ್ಷರಾದ ನಾಗೇಶ್, ನಿರ್ದೇಶಕರಾದ ಪ್ರೇಮ್ ಕುಮಾರ್, ಶ್ರೀಧರ ಹೂವಳ್ಳಿ, ಮೂರ್ನಾಡು ಬ್ಲಾಕ್ ಅಧ್ಯಕ್ಷರಾದ ಹರಿಣಿ ವಿಜಯ್, ಸೋಮಶೇಖರ, ಎಂ.ಎನ್.ಮೂರ್ತಿ, ರೇಣುಕಾ ಇತರರು ಇದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*