ಬೆಂಗಳೂರು ಜೂ.7 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಚಂಡ ಗೆಲುವು ಸಾಧಿಸಿದ ಡಾ.ಧನಂಜಯ ಸರ್ಜಿ ಅವರು ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಭೇಟಿಯಾದರು. ಗೆಲುವಿನ ಬಗ್ಗೆ ಹರ್ಷ ವ್ಯಕ್ತಪಡಿಸಿದ ಯಡಿಯೂರಪ್ಪ ಅವರು ಡಾ.ಧನಂಜಯ ಸರ್ಜಿ ಅವರನ್ನು ಅಭಿನಂದಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ್ರು, ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಡಾ.ಧನಂಜಯ ಸರ್ಜಿ ಪತ್ನಿ ನಮಿತಾ ಸರ್ಜಿ, ಸೋದರ ಹರ್ಷ ಸರ್ಜಿ, ನಾಗವೇಣಿ ಸರ್ಜಿ ಮತ್ತಿತರರು ಹಾಜರಿದ್ದರು.









