ಸೋಮವಾರಪೇಟೆ ಜೂ.8 NEWS DESK : ಸೋಮವಾರಪೇಟೆ ತಾಲ್ಲೂಕು ಜಾನಪದ ಪರಿಷತ್ ಮತ್ತು ಒಕ್ಕಲಿಗರ ಯುವ ವೇದಿಕೆ ಸಹಯೋಗದಲ್ಲಿ ವಿಶ್ವ ರಕ್ತದಾನದ ದಿನಾಚರಣೆಯ ಪ್ರಯುಕ್ತ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಜೂ.10 ರಂದು ರಕ್ತದಾನ ಶಿಬಿರ ನಡೆಯಲಿದೆ ಎಂದು ಪರಿಷತ್ ತಾಲ್ಲೂಕು ಅಧ್ಯಕ್ಷ ಕೆ.ಎ.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 









