
ಸುಂಟಿಕೊಪ್ಪ ಜೂ.8 NEWS DESK : ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮತ್ತಿಕಾಡುವಿನಲ್ಲಿ ನಡೆದಿದೆ.
ಸುನಿತಾ (32) ಗಾಯಗೊಂಡಿರುವ ಮಹಿಳೆ.
ಮತ್ತಿಕಾಡುವಿನ ತೋಟವೊಂದರಲ್ಲಿ ಎಂದಿನಂತೆ ಐವರು ಮಹಿಳೆಯರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಸುನಿತಾ ಅವರ ಕೈ ಗಾಯಗೊಂಡಿದ್ದು, ಗಾಯಾಳುವಿಗೆ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆತರಲಾಯಿತು.
ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಆರ್‌ಆರ್‌ಟಿ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಡಾನೆಯನ್ನು ಕಾಡಿಗೆ ಅಟ್ಟುವ ಕಾರ್ಯಚರಣೆ ನಡೆಸಿದರು.







