
ವಿರಾಜಪೇಟೆ ಜೂ.10 NEWS DESK : ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆಯ ಅಮ್ಮತ್ತಿ ಕಾರ್ಮಾಡು ಗ್ರಾಮದಲ್ಲಿ ನಡೆದಿದೆ.
ಟಿ.ಎನ್.ರವಿ (41) ಎಂಬುವವರೇ ಮೃತ ವ್ಯಕ್ತಿ. ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.








