
ಮಡಿಕೇರಿ ಜೂ.10 NEWS DESK : ಕಂಡಕರೆ ಗಾಂಧಿ ಯುವಕ ಸಂಘ ಹಾಗೂ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಸಮಾಜ ಸೇವಕ, ಕೆ.ನಿಡುಗಣೆ ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ ಅವರಿಗೆ ‘ಮಾದರಿ ಜನಪ್ರತಿನಿಧಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಂಡಕರೆಯಲ್ಲಿ ನಡೆದ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಮಿತಿಯ ಪ್ರಮುಖರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭ ಸೇವ್ ದಿ ಡ್ರೀಮ್ಸ್ ಮುಖ್ಯಸ್ಥರಾದ ಜಾಬಿರ್ ನಿಝಾಮಿ, ಅಂತರಾಷ್ಟ್ರೀಯ ಮಾಜಿ ರಗ್ಬಿ ಆಟಗಾರ ಹಾಗೂ ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಗಾಂಧಿ ಯುವಕ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತ ಇಸ್ಮಾಯಿಲ್ ಕಂಡಕರೆ, ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಸಲಹೆಗಾರ, ಹಾಗೂ ಎಸ್.ಎನ್.ಡಿ.ಪಿ ಮಡಿಕೇರಿ ಶಾಖಾ ಅಧ್ಯಕ್ಷರಾದ ಟಿ.ಆರ್ ವಾಸುದೇವ್, ಕರ್ನಾಟಕ ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಮತ್ತಿತರರು ಉಪಸ್ಥಿತರಿದ್ದರು.








