
ಮಡಿಕೇರಿ ಜೂ.10 NEWS DESK : ನಾಪೋಕ್ಲು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಿಶ್ವ ಆಹಾರ ಸುರಕ್ಷತಾ ದಿನ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಶ್ವ ಆಹಾರ ಸುರಕ್ಷತಾ ದಿನದ ಮಹತ್ವ, ಆಹಾರ ಸುರಕ್ಷತೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ನೀಡಲಾಯಿತು.
ಈ ವರ್ಷದ ವಿಶ್ವ ಆಹಾರ ಸುರಕ್ಷತಾ ದಿನದ ಘೋಷವಾಕ್ಯ “ಆಹಾರ ಸುರಕ್ಷತೆ–ಅನಿರೀಕ್ಷಿತ ಘಟನೆಗಳಿಗೆ ಸಿದ್ದರಾಗಿ” ಎಂಬುದರ ಬಗ್ಗೆ ಮತ್ತು ಇದರ ಮಹತ್ವದ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲದೆ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಕಿತ ಅಧಿಕಾರಿ ಡಾ. ಇ.ಅನಿಲ್ ಧಾವನ್, ನಾಪೋಕ್ಲು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಹಿರಿಯ ಆಹಾರ ಸುರಕ್ಷತಾಧಿಕಾರಿ ಜೆ.ಎನ್.ಮಂಜುನಾಥ್, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಜರಿದ್ದರು.








