
ನಾಪೋಕ್ಲು ಜೂ.11 NEWS DESK : ಮಹಿಳೆಯರು ಸಂಘ-ಸಂಸ್ಥೆಗಳ ಪ್ರತಿನಿಧಿಗಳಾಗಿ ಪಾಲ್ಗೊಂಡು ಸಮಾಜದಲ್ಲಿ ಬೆರೆತು ಅಭಿವೃದ್ಧಿ ಹೊಂದಬೇಕು ಎಂದು ಜಿ.ಪಂ ಮಾಜಿ ಸದಸ್ಯೆ, ನಿವೃತ್ತ ಪ್ರಾಧ್ಯಾಪಕಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಹೇಳಿದರು.
ಕೂರುಳಿ ಸುಭಾಷ್ ನಗರ ಸಮುದಾಯ ಭವನದಲ್ಲಿ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂರುಳಿ ಸುಭಾಷ್ ನಗರ ಕಾರ್ಯಕ್ಷೇತ್ರದ ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು, ಮಾತನಾಡಿದರು.
ಸಂಘ ಸಂಸ್ಥೆಗಳನ್ನು ಕಟ್ಟಿ ಬೆಳೆಸುವುದು ಒಂದು ಕಲೆ ಎಂದ ಅವರು ಮಕ್ಕಳಿಗೆ ಶಿಕ್ಷಣ ಕೊಡುವಲ್ಲಿ ಪೋಷಕರ ಪಾತ್ರ ಬಗ್ಗೆ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರುದರು.
ಸಂಘದ ಮೇಲ್ವಿಚಾರಕ ಸುನಿಲ್ ಸಂಘದ ಧ್ಯೇಯೋದ್ದೇಶಗಳ ಬಗ್ಗೆ ವಿವರಿಸಿದರು.
ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ದೈನಬ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರತಿನಿಧಿ ಉಮಾಲಕ್ಷ್ಮಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು. ಸಂಘದ ಸದಸ್ಯ ಟಿ.ಆರ್.ಪೊನ್ನಮ್ಮ ಸ್ವಾಗತಿಸಿದರು. ಸಾವಿತ್ರಿ ನಿರೂಪಿಸಿ, ವಂದಿಸಿದರು.
ವರದಿ : ದುಗ್ಗಳ ಸದಾನಂದ.








