ನವದೆಹಲಿ ಜೂ.11 NEWS DESK : ಕೇಂದ್ರ ಸರಕಾರದ ಬೃಹತ್ ಕೈಗಾರಿಕೆ ಖಾತೆಯ ಸಚಿವರಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡರು. ಭಾರತವು ಜಗತ್ತಿನ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಸಂಕಲ್ಪ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸು ಮಾಡುವುದು ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿ ದೇಶಾದ್ಯಂತ ವಿಸ್ತೃತವಾಗಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಶ್ರಮಿಸಲಾಗುವುದು ಎಂದು ಸಚಿವ ಕುಮಾರಸ್ವಾಮಿ ಭರವಸೆ ನೀಡಿದರು. ಈ ಸಂದರ್ಭ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು.










