ಮಡಿಕೇರಿ ಜೂ.12 NEWS DESK : ಭಾರತೀಯ ಭಾಷಾ ಸಂಸ್ಥಾನ, ಉನ್ನತ ಶಿಕ್ಷಣ ಇಲಾಖೆ, ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ
ಸಹಯೋಗದಲ್ಲಿ ಮೈಸೂರಿನಲ್ಲಿ ಆಯೋಜಿಸಿದ್ದ ಭಾರತೀಯ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ (ಸಿ.ಸಿ.ಎಲ್.ಐ-24) ದಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸಿ.ಎಂ.ರೇವತಿ (ಡಾ. ಮುಲ್ಲೇಂಗಡ ರೇವತಿ ಪೂವಯ್ಯ) ಆಹ್ವಾನಿತ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸಿದ್ದರು.
ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಸಭಾಂಗಣದಲ್ಲಿ ನಡೆದ ವಿಚಾರ ಗೋಷ್ಠಿಯಲ್ಲಿ ‘ಕನ್ನಡ ಜನಪದದೊಳಗಣ ಕೊಡವ ಜಾನಪದ’ ಎಂಬ ವಿಷಯವಾಗಿ ವಿಚಾರ ಮಂಡಿಸಿ ಗಮನಸೆಳೆದರು. ದೇಶದ ವಿವಿಧ ರಾಜ್ಯಗಳ ವಿವಿಧ ಭಾಷೆಯ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು.