ಹುಣುಸೂರು ಜೂ.12 NEWS DESK : ಐದು ವರ್ಷದ ಗಂಡು ಹುಲಿಯೊಂದರ ಕಳೇಬರ ನಾಗರಹೊಳೆ ಉದ್ಯಾನವನದಲ್ಲಿ ಪತ್ತೆಯಾಗಿದೆ. ಹುಲಿಗಳ ಕಾದಾಟದಲ್ಲಿ ಈ ಹುಲಿ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ.
ಹುಣಸೂರು ವನ್ಯಜೀವಿ ವಲಯದ ಲಕ್ಷ್ಮೀಪುರ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿಗಳು ಕೊಳೆತ ಸ್ಥಿತಿಯಲ್ಲಿದ್ದ ಹುಲಿ ಕಳೇಬರವನ್ನು ಪತ್ತೆ ಹಚ್ಚಿದ್ದಾರೆ. ಹಿರಿಯ ಅರಣ್ಯ ಅಧಿಕಾರಿಗಳ ಮಾರ್ಗದರ್ಶನದಂತೆ ಹುಲಿಯ ಮೃತದೇಹವನ್ನು ದಹನ ಮಾಡಲಾಯಿತು.









