ಸೋಮವಾರಪೇಟೆ ಜೂ.12 NEWS DESK : ಸೋಮವಾರಪೇಟೆ ತಾಲ್ಲೂಕು ಮೊಗೇರ ಸೇವಾ ಸಮಾಜದ ವತಿಯಿಂದ ಪಟ್ಟಣದ ಪತ್ರಿಕಾ ಭವನದಲ್ಲಿ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಸಮುದಾಯದ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೊಗೇರ ಸೇವಾ ಸಮಿತಿಯ ರಾಜ್ಯ ಸಮಿತಿ ಸದಸ್ಯ ಪಿ.ಕೆ.ಚಂದ್ರು ಮಾತನಾಡಿ, ಮೊಗೇರ ಸಮಾಜದ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕೆಂದು ಕರೆ ನೀಡಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಜನಾರ್ಧನ್ ಮಾತನಾಡಿ, ಮೊಗೇರ ಸಮಾಜದ ವತಿಯಿಂದ ಸಮುದಾಯದ ಅಭಿವೃದ್ಧಿಗೆ ಹಲವಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಸಮುದಾಯದವರು ಸಂಘಟನೆಯಾದಲ್ಲಿ ಮಾತ್ರ ಎಲ್ಲಾ ರೀತಿಯ ಸವಲತ್ತು ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘವನ್ನು ಇನ್ನಷ್ಟು ಬಲಪಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಿ.ಎಂ. ದಾಮೋಧರ್, ಕಾರ್ಯದರ್ಶಿ ಹರೀಶ್, ತಾಲೂಕು ಅಧ್ಯಕ್ಷ ವಸಂತ್, ಕಾರ್ಯದರ್ಶಿ ಕೆ.ಕೆ. ಗಣೇಶ್, ಉಪಾಧ್ಯಕ್ಷ ಹರೀಶ್, ಖಜಾಂಚಿ ಜಯಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Breaking News
- *ಕೊಡಗಿನ ಬಸವೇಶ್ವರ, ಪೇಟೆ ರಾಮ ಮಂದಿರ, ವಿಜಯ ವಿನಾಯಕ ದೇವಾಲಯಗಳಲ್ಲಿ ಕಳ್ಳತನ : ಅಂತರ್ ಜಿಲ್ಲಾ ಆರೋಪಿಯ ಬಂಧನ*
- *ಕನಕದಾಸರು ಕೀರ್ತನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು : ಶಾಸಕ ಡಾ.ಮಂತರ್ ಗೌಡ*
- *ಜೋಡುಬೀಟಿ- ಕುಂದ ಸಂಪರ್ಕ ರಸ್ತೆಗೆ ನಾಯಕ್ ಕೂಕಂಡ ಎನ್.ಪೊನ್ನಪ್ಪ ನಾಮಕರಣ : ಎಲ್ಲೆಡೆ ವೀರಯೋಧರಿಗೆ ಗೌರವಸಲ್ಲಿಸುವ ಕಾರ್ಯವಾಗಬೇಕು : ಕೊಟ್ಟುಕತ್ತಿರ ಸೋಮಣ್ಣ*
- *ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ*
- *ನ.19 ರಂದು ಮಡಿಕೇರಿ ತಲುಪಲಿದೆ ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್ನ ಬೈಕ್ ರ್ಯಾಲಿ*
- *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸ ಜಯಂತಿಯ ಅರ್ಥಪೂರ್ಣ ಆಚರಣೆ : ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಕನಕದಾಸರು : ಮೇಜರ್ ಡಾ.ರಾಘವ ಶ್ಲಾಘನೆ*
- *ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ*
- *ಮಡಿಕೇರಿಯಲ್ಲಿ ವಕೀಲರ ಕ್ರೀಡಾಕೂಟ : ಕ್ರೀಡಾ ಸ್ಫೂರ್ತಿ ಜೀವನಕ್ಕೂ ಸ್ಫೂರ್ತಿಯಾಗಲಿ : ಶಾಸಕ ಡಾ.ಮಂತರ್ ಗೌಡ*
- ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*