
ಸೋಮವಾರಪೇಟೆ ಜೂ.12 NEWS DESK : ಸೋಮವಾರಪೇಟೆ ತಾಲ್ಲೂಕು ಜಾನಪದ ಪರಿಷತ್ ಹಾಗು ಒಕ್ಕಲಿಗರ ಯುವ ವೇದಿಕೆ ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಉಚಿತ ರಕ್ತದಾನ ಶಿಬಿರದಲ್ಲಿ, ಜಿಲ್ಲಾ ರಕ್ತ ನಿಧಿ ಘಟಕದ ಅಧಿಕಾರಿ ಡಾ.ಕರುಂಬಯ್ಯ ಹಾಗೂ ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಪ್ರಯೋಗಶಾಲೆಯ ಸಿಬ್ಬಂದಿ ತಸ್ಮಿಯಾ ಬಾನು ಅವರುಗಳನ್ನು ಸನ್ಮಾನಿಸಲಾಯಿತು.
ಜಾನಪದ ಪರಿಷತ್ ಅಧ್ಯಕ್ಷ ಕೆ.ಎ. ಪ್ರಕಾಶ್, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್, ಸ್ಥಾಪಕಾಧ್ಯಕ್ಷ ಬಿ.ಜೆ. ದೀಪಕ್, ಆಸ್ಪತ್ರೆಯ ಆಡಳಿತಾಧಿಕಾರಿ ಮೀನಾಕ್ಷಿ ಇದ್ದರು.









