ಮಡಿಕೇರಿ ಜೂ.13 NEWS DESK : ಸೋಮವಾರಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ವತಿಯಿಂದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಬಳಗುಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಆರ್.ಮೋಹನ ಮಾತನಾಡಿ, ಸಾರ್ವಜನಿಕರು ಮನೆಯಿಂದ ಕಸ ನೀಡುವ ಸಂದರ್ಭ ಒಣ ಕಸ ಹಾಗೂ ಹಸಿ ಕಸ ವಿಂಗಡಿಸಿ ನೀಡಬೇಕು. ಅತಿಯಾದ ಪ್ಲಾಸ್ಟಿಕ್ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಮಕ್ಕಳಿಗೆ ಸಲಹೆ ನೀಡಿದರು. ಪ್ರತಿಯೊಬ್ಬರು ಗಿಡನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಆರಕ್ಷಕ ಠಾಣೆಯ ಆರಕ್ಷಕ ಶಶಿಕುಮಾರ್, ಶಾಲೆಯ ಮುಖ್ಯೋಪಾಧ್ಯಾಯರಾದ ಭಾಗ್ಯ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರಶಿದ್, ಆಶಾ ಕಾರ್ಯಕರ್ತರಾದ ಬಿ.ಆರ್.ಶಾರದ, ಶಾಂತಳ್ಳಿ ವಲಯದ ಮೇಲ್ವಿಚಾರಕ ಲಕ್ಷ್ಮಣ್, ಕೃಷಿ ಮೇಲ್ವಿಚಾರಕರಾದ ರಾಜಣ್ಣ, ಸೇವಾ ಪ್ರತಿನಿಧಿ ಸುನಿತಾ, ಶಾಲಾ ಸಹ ಶಿಕ್ಷಕರು, ಗ್ರಾ.ಪಂ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.