ಸುಂಟಿಕೊಪ್ಪ ಜೂ.13 NEWS DESK : ಸುಂಟಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಅವರು ರಸ್ತೆ ಸುರಕ್ಷತಾ ನಿಯಮಗಳು ಮತ್ತು ಪಾಲನೆಯ ಬಗ್ಗೆ ಸುಂಟಿಕೊಪ್ಪ ವ್ಯಾಪ್ತಿಯ ಶಾಲಾ ಕಾಲೇಜು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.
ಸಂತ ಮೇರಿ ಶಾಲಾ ವಾಹನದಲ್ಲಿ ಹಾಗೂ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತೆರಳಿ ರಸ್ತೆ ಸುರಕ್ಷತಾ ನಿಯಮಗಳು, ಅವುಗಳನ್ನು ಪಾಲಿಸುವ ಬಗ್ಗೆ ಮತ್ತು ವೈಯಕ್ತಿಕ ಸುರಕ್ಷತೆಯ ಕಾನೂನು ನಿಯಮಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿದರು.
ಕಾಲೇಜು ಪ್ರಾಂಶುಪಾಲರಾದ ಶ್ರೀಲತಾ ಹಾಗೂ ಉಪನ್ಯಾಸಕರು ಇದ್ದರು.
ರಾಜ್ಯ ಹೆದ್ದಾರಿಯಲ್ಲಿ ಶಾಲಾ ವಾಹನ ಹಾಗೂ ದ್ವಿಚಕ್ರ ವಾಹನಗಳ ಸವಾರರಿಗೆ ರಸ್ತೆ ಸುರಕ್ಷತೆ ಕುರಿತು ವಿವರಿಸಿದ ಠಾಣಾಧಿಕಾರಿಗಳು ಮಕ್ಕಳನ್ನು ಶಾಲೆಗಳಿಗೆ ಕರೆದೊಯ್ಯುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಪೋಷಕರಿಗೆ ಕಿವಿಮಾತು ಹೇಳಿದರು.