ಮಡಿಕೇರಿ ಜೂ.13 NEWS DESK : ಕರ್ನಾಟಕ ಸರ್ಕಾರದ ಬಸ್ ಸೇವೆಗಳಲ್ಲಿ ಒಂದಾದ ನೂತನ ‘ಅಶ್ವಮೇಧ’ ಬಸ್‌ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು ಮಡಿಕೇರಿ-ಸೋಮವಾರಪೇಟೆ ಮಾರ್ಗದಲ್ಲಿ ಬೆಂಗಳೂರಿಗೆ ತೆರಳಲು ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿತ್ತು, ಬೇಡಿಕೆಯನ್ನು ಈಡೇರಿಸಲಾಗಿದೆ ಎಂದರು.
ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದಿಂದ ಸೋಮವಾರಪೇಟೆ ಮಾರ್ಗ 3 ಬಸ್‌ಗಳು, ಕುಶಾಲನಗರದಿಂದ 2 ಬಸ್‌ಗಳು ಸಂಚರಿಸುತ್ತಿವೆ. ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದಲ್ಲಿ 97 ಬಸ್‌ಗಳು ವಿವಿಧ ಮಾರ್ಗದಲ್ಲಿ ಸಂಚಾರ ಮಾಡುತ್ತಿವೆ. ಕುಶಾಲನಗರ ಕೆಎಸ್‌ಆರ್‌ಟಿಸಿ ಆರಂಭವಾದ ನಂತರ ಮತ್ತಷ್ಟು ಬಸ್‌ಗಳು ಸಂಚರಿಸಲಿವೆ ಮಡಿಕೇರಿ-ಸೋಮವಾರಪೇಟೆ-ಅರಕಲಗೋಡು-ಚೆನ್ನರಾಯಪಟ್ಟಣ ಮಾರ್ಗ ಪ್ರತಿ ದಿನ ಬೆಳಗ್ಗೆ 10.15 ಗಂಟೆಗೆ ಹೊರಟು ಸಂಜೆ 4.45 ಗಂಟೆಗೆ ಬೆಂಗಳೂರು ತಲುಪಲಿದೆ ಎಂದು ಶಾಸಕರು ಮಾಹಿತಿ ನೀಡಿದರು. ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕರಾದ ವೀರಭದ್ರಸ್ವಾಮಿ, ಸಂಚಾರಿ ನಿಯಂತ್ರಕರು ಮತ್ತಿತರರು ಇದ್ದರು.










