ಮಡಿಕೇರಿ ಜೂ.14 NEWS DESK : 2023-24 ನೇ ಸಾಲಿನಲ್ಲಿ ಆಯವ್ಯಯ ಕಂಡಿಕೆ-144 ಘೋಷಣೆಯನ್ವಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳು ಪಡೆಯುವ ಸಾಲಕ್ಕೆ ರೂ.2 ಕೋಟಿಗಳವರೆಗೆ ಸಮಾನಾಂತರ ಖಾತರಿ ನೀಡುವ ಯೋಜನೆಯನ್ನು ವಿಸ್ತರಿಸಿ ಆದೇಶಿಸಲಾಗಿದ್ದು ಅರ್ಹ ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ಸಮಾಜ ಕಲ್ಯಾಣ ಇಲಾಖೆಯಲ್ಲಿ ಪಡೆದುಕೊಳ್ಳುವುದು.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು. ದೂ.ಸಂ. 08272-225531, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು. ದೂ.ಸಂ. 9480843155, ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು. ದೂ.ಸಂ. 08276-281115 ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು ದೂ.ಸಂ. 9480843157 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.